Katapady: ದ್ವಿಚಕ್ರ ವಾಹನ-ಲಾರಿ ನಡುವೆ ಭೀಕರ ಅಪಘಾತ; ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸಾವು
Katapady: ದ್ವಿಚಕ್ರ -ಲಾರಿ ನಡುವೆ ಭೀಕರ ಅಪಘಾತವೊಂದು ಜ.10 ರ ಶುಕ್ರವಾರ ತಡರಾತ್ರಿ ಉದ್ಯಾವರ ಬಲೈಪಾದೆ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದ್ದು, ಈ ಭೀಕರ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಇದೀಗ ಮೃತ ಹೊಂದಿರುವ ಕುರಿತು ವರದಿಯಾಗಿದೆ.
ಲಾರಿಯ ಅಡಿಭಾಗದಲ್ಲಿ ಬೈಕ್ ಸಿಲುಕಿಕೊಂಡಿದ್ದು, ಬೈಕ್ಗೆ ಬೆಂಕಿ ಹೊತ್ತಿಕೊಂಡಿದೆ. ಲಾರಿ ಹಾಗೂ ಬೈಕ್ ಈ ಸಂದರ್ಭದಲ್ಲಿ ಬೆಂಕಿಗಾಹುತಿಯಾಗಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬೈಕ್ ಸವಾರ ಪಣಿಯೂರು ಮೂಲದ ಅವಿನಾಶ್ ಆಚಾರ್ಯ (19) ಮೃತ ಯುವಕ ಎಂದು ವರದಿಯಾಗಿದೆ.
ಲಾರಿ ಕೇರಳ ಮೂಲದ್ದು, ಕ್ಲೀನರ್, ಚಾಲಕ ಬಚಾವಾಗಿದ್ದಾರೆ. ಅಗ್ನಿಶಾಮಕದಳ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಉಡುಪಿಯಲ್ಲಿ ಪ್ಯಾರಾ ಮೆಡಿಕಲ್ ಕಲಿಯುತ್ತಿದ್ದ ಯುವಕ ರಾತ್ರಿ ಪರಿಚಯಸ್ಥರ ಮನೆಯ ಕಾರ್ಯಕ್ರಮಕ್ಕೆ ತೆರಳಿದ್ದು, ಅಲ್ಲಿಂದ ವಾಪಾಸ್ಸಾಗುವಾಗ ಈ ದುರ್ಘಟನೆ ನಡೆದಿದೆ.
ಟ್ರಕ್ ಡಿಕ್ಕಿ ಹೊಡೆದ ತೀವ್ರತೆಗೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದು, ತಲೆಗೆ ಗಂಭೀರ ಗಾಯವಾಗಿ ಮೃತಹೊಂದಿದ್ದಾನೆ. ಮಧ್ಯರಾತ್ರಿ ಈ ಘಟನೆ ನಡೆದ ಕಾರಣ ತುರ್ತು ಕಾರ್ಯಾಚರಣೆ ಮಾಡಲು ಸಾಧ್ಯವಾಗದ ಕಾರಣ ಲಾರಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲು ಮಾಡಲಾಗಿದ್ದು, ತನಿಖೆ ಮುಂದುವರಿದಿದೆ.
Comments are closed, but trackbacks and pingbacks are open.