Chamarajapete: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ – ಕೆಚ್ಚಲು ಕೊಯ್ದ ಕಾರಣ ಬಿಚ್ಚಿಟ್ಟ ಆರೋಪಿ !!
Chamarajapete: ರಸ್ತೆಯಲ್ಲಿ ಮಲಗಿದ್ದಂತಹ ಮೂರು ಹಸುಗಳ ಕೆಚ್ಚಲುಗಳನ್ನು ಕಿಡಿಗೇಡಿಗಳು ಕೊಯ್ದಿರುವ ಹೀನ ಕೃತ್ಯ ಬೆಂಗಳೂರು ಜಿಲ್ಲೆಯ ಚಾಮರಾಜಪೇಟೆಯಲ್ಲಿ ನಡೆದಿದೆ. ಸದ್ಯಕ್ಕೆ ಚಾಮರಾಜಪೇಟೆಯ ಬಸವ ಆಸ್ಪತ್ರೆಯಲ್ಲಿ ಮೂರು ಹಸುಗಳಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಇದು ಹಿಂದೂ ನಾಯಕರನ್ನು ಕೆರಳಿಸಿದ್ದು, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ವೇಳೆ ಆರೋಪಿಯು ಕೃತ್ಯದ ಹಿಂದಿನ ಕಾರಣವನ್ನು ಬಿಚ್ಚಿಟ್ಟಿದ್ದಾನೆ.
ಹಸುಗಳ ಕೆಚ್ಚಲು ಕೊಯ್ದ ಬಗ್ಗೆ ತಿಳಿದ ಕೂಡಲೇ ಹಸುಗಳ ಮಾಲೀಕ ಕರ್ಣ ಕಾಟನ್‌ಪೇಟೆ ಪೊಲೀಸರಿಗೆ ಮಾಹಿತಿ ನೀಡಿ ದೂರನ್ನು ನೀಡಿದ್ದು, ಈ ದೂರಿನನ್ವಯ ತನಿಖೆ ಆರಂಭಿಸಿದ ಕಾಟನ್‌ಪೇಟೆ ಪೊಲೀಸರು ನಿನ್ನೆ ( ಜನವರಿ 12 ) ರಾತ್ರಿ ಓರ್ವ ಆರೋಪಿ ಬಿಹಾರದ ಚಂಪರಣ್ ಮೂಲದ ಸೈಯದ್ ನಸ್ರು ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಈ ವೇಳೆ ಆತ ತಾನೇಕೆ ಈ ಕೃತ್ಯ ಮಾಡಿದ್ದೇನೆ ಎಂಬುದನ್ನು ಬಹಿರಂಗಪಡಿಸಿದ್ದು ಕುಡಿದ ಮತ್ತಿನಲ್ಲಿ ಈ ಕೆಲಸ ಮಾಡಿದ್ದಾಗಿ ಸೈಯದ್ ನಸ್ರು ಪೊಲೀಸರ ಮುಂದೆ ಹೇಳಿಕೊಂಡಿದ್ದು, ಕೃತ್ಯದಲ್ಲಿ ಈತನ ಜತೆ ಕೈ ಜೋಡಿದ್ದವರ ಪತ್ತೆಗೆ ಬಲೆ ಬೀಸಿದ್ದಾರೆ. ಸದ್ಯ ಈ ಆರೋಪಿಯನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಜನವರಿ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Comments are closed, but trackbacks and pingbacks are open.