Chikkamagaluru : ಸಿ ಟಿ ರವಿಗಾಗಿ ಕೊರಗಜ್ಜ ದೈವದ ಮೊರೆ ಹೋದ ಬಿಜೆಪಿ ಕಾರ್ಯಕರ್ತರು !! ಯಾಕಾಗಿ?
Chikkamagaluru : ಕೆಲವು ದಿನಗಳ ಹಿಂದಷ್ಟೇ, ಸುವರ್ಣ ಸೌಧದಲ್ಲಿ ಅಶ್ಲೀಲ ಪದ ಬಳಕೆ ಆರೋಪದ ಸಂಬಂಧ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಗಲಾಟೆ ತಾರಕಕೇರಿತ್ತು. ಇದು ರಾಜ್ಯಾದ್ಯಂತ ಸಾಕಷ್ಟು ಸುದ್ದಿಯಾಗಿತ್ತು. ಬಳಿಕ ಅವರ ನಡುವೆ ವೈಮನಸ್ಸು ಉಂಟಾಗಿತ್ತು. ನಂತರ ಈ ವಿಚಾರ ಕೊಂಚಮಟ್ಟಿಗೆ ತಣ್ಣಗಾಗಿತ್ತು. ಆದರೆ ಮತ್ತೆ ಕೆಲವು ದಿನಗಳ ಹಿಂದೆ ಅನಾಮಧೇಯ ವ್ಯಕ್ತಿಯೊಬ್ಬರು ಪತ್ರ ಬರೆದು ಲಕ್ಷ್ಮೀ ಹೆಬ್ಬಾಳ್ಕರ್ಗೆ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿಗೆ ಬೆದರಿಕೆ ಹಾಕಿದ್ದರು. ಈ ಸಂಬಂಧ ಬಿಜೆಪಿ ಕಾರ್ಯಕರ್ತರು ಇದೀಗ ಸಿಟಿ ರವಿ ಪರವಾಗಿ ಕೊರಗಜ್ಜದ ಮೊರೆ ಹೋಗಿದ್ದಾರೆ.
ಹೌದು, ಬಿಜೆಪಿ ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಸಿ.ಟಿ. ರವಿಗೆ ಬೆದರಿಕೆ ಪತ್ರ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ದೈವರ ಮೊರೆ ಹೋಗಿದ್ದಾರೆ. ಕರಾವಳಿಯ ಆರಾಧ್ಯ ದೈವ ಕೊರಗಜ್ಜನಿಗೆ ಪೂಜೆ ಸಲ್ಲಿಸಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸಿಟಿ ರವಿ ಪ್ರಕರಣದಲ್ಲಿ ಸಿ.ಟಿ. ರವಿಗೆ ನ್ಯಾಯ ಸಿಗಲಿ ಎಂದು ಕೊರಗಜ್ಜನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗುಳದಲ್ಲಿರುವ ಕೊರಗಜ್ಜನ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದು ಸಿ.ಟಿ. ರವಿಗೆ ಬೆದರಿಕೆ ಪತ್ರ ಬರೆದವರು, ಸುಮ್ಮನೆ ಆರೋಪ ಮಾಡಿದವರು, ವೈಯುಕ್ತಿಕ ಟಾರ್ಗೆಟ್ ಮಾಡಿ ಹಿಂಸೆ ನೀಡಿದ ಎಲ್ಲರಿಗೂ ಸೂಕ್ತ ಬುದ್ದಿ ನೀಡುವಂತೆ ಕೊರಗಜ್ಜನ ಎದುರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರಾರ್ಥನೆ ಸಲ್ಲಿಸಿದ್ದಾರೆ.
ಅನಾಮಧೇಯ ವ್ಯಕ್ತಿಯ ಪತ್ರದಲ್ಲಿ ಏನಿತ್ತು?
“ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರ ಸೂರ್ಯನನ್ನು ಹತ್ಯೆ ಮಾಡಲಾಗುತ್ತದೆ” ಎಂಬ ಬೆದರಿಕೆ ಪತ್ರ ಸಿಟಿ ರವಿ(C T Ravi)ಯವರ ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸಕ್ಕೆ ಬಂದಿದೆ. ಪತ್ರದಲ್ಲಿ 15 ದಿನದೊಳಗೆ ಚಿಕ್ಕಮಗಳೂರಿನಿಂದ ಬಂದು ಬೆಳಗಾವಿ ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ನಿಮ್ಮ ಕೈಕಾಲು ಮುರಿದು ಸಾಯಿಸುತ್ತೇವೆ. ನಿನ್ನ ಮಗನನ್ನು ಸಾಯಿಸುತ್ತೇವೆ ಹುಷಾರಾಗಿ ಇರಿ’ ಎಂದು ಬರೆಯಲಾಗಿದೆ
Comments are closed.