Home News Manu Bhakar: ಭೀಕರ ರಸ್ತೆ ಅಪಘಾತ – ಕುಟುಂಬದವರನ್ನು ಕಳೆದುಕೊಂಡ ಮನು ಭಾಕರ್

Manu Bhakar: ಭೀಕರ ರಸ್ತೆ ಅಪಘಾತ – ಕುಟುಂಬದವರನ್ನು ಕಳೆದುಕೊಂಡ ಮನು ಭಾಕರ್

Hindu neighbor gifts plot of land

Hindu neighbour gifts land to Muslim journalist

Manu Bhakar: ಒಲಿಂಪಿಕ್ಸ್ ನಲ್ಲಿ ಎರಡು ಪದಕ ವಿಜೇತೆ, ಇತ್ತೀಚಿಗಷ್ಟೇ ಖೇಲ್ ರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಮನು ಭಾಕರ್​(Manu Bhakar)ಅವರು ರಸ್ತೆ ಅಪಘಾತದಲ್ಲಿ ತಮ್ಮ ಕುಟುಂಬದವರನ್ನು ಕಳೆದುಕೊಂಡಿದ್ದಾರೆ.

ಹೌದು, ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಒಲಿಂಪಿಕ್ಸ್ ಪದಕ ವಿಜೇತೆ ಶೂಟರ್ ಮನು ಭಾಕರ್ ಅಜ್ಜಿ ಮತ್ತು ಚಿಕ್ಕಪ್ಪ ಮೃತಪಟ್ಟಿದ್ದಾರೆ. ಘಟನೆಯ ನಂತರ ಕಾರು ಚಾಲಕ ಪರಾರಿಯಾಗಿದ್ದಾನೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ.

ಅಂದಹಾಗೆ ಎರಡು ದಿನಗಳ ಹಿಂದೆ ಮನು ಭಾಕರ್ ಅವರಿಗೆ ರಾಷ್ಟ್ರಪತಿಗಳಿಂದ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ್ದರು. ಇದಾದ ನಂತರ, ಅವರ ಕುಟುಂಬಕ್ಕೆ ಬರಸಿಡಿಲು ಬಡಿದಿದೆ. ಮನು ಭಾಕರ್ ಅವರ ಚಿಕ್ಕಪ್ಪ ಯುಧ್ವೀರ್ ಸಿಂಗ್ ಚಾಲಕರಾಗಿ ಕೆಲಸ ಮಾಡುತ್ತಿದ್ದು ಅವರ ಮನೆ ಮಹೇಂದ್ರಗಢ ಬೈಪಾಸ್‌ನಲ್ಲಿದೆ.