Charmadi Ghat: ಚಾರ್ಮಾಡಿ ಘಾಟಿಯ ಅಣ್ಣಪ್ಪ ಗುಡಿಯ ಮೇಲ್ಭಾಗದಲ್ಲಿ ಕಾಡ್ಗಿಚ್ಚು!

Share the Article

Charmadi Ghat: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ.

ಗಾಳಿಯ ವೇಗ ಹೆಚ್ಚಿದ್ದರಿಂದ ಬೆಂಕಿ ಹೆಚ್ಚುತ್ತಲೇ ಇದೆ. ಅರಣ್ಯ ಇಲಾಖೆ, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿದ್ದಾರೆ.

ಶುಕ್ರವಾರ ರಾತ್ರಿ ಬೆಂಕಿ ಹತ್ತಿಕೊಂಡಿದೆ. ಚಾರ್ಮಾಡಿ ಘಾಟಿಯ ಬಿದಿರುತಳ ಗ್ರಾಮದಲ್ಲಿ ನಾಲ್ಕು ದಿನದ ಹಿಂದೆ ಬೆಂಕಿ ಕಾಣಿಸಿಕೊಂಡಿತ್ತು. ಈ ಘಟನೆಯಲ್ಲಿ 500 ಕ್ಕೂ ಅಧಿಕರ ಅರಣ್ಯ ಪ್ರದೇಶ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಭಸ್ಮವಾಗಿತ್ತು.

Comments are closed.