Mangalore : ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಚುನಾವಣೆ : ಹಾಲಿ ಅಧ್ಯಕ್ಷ ಜೈರಾಜ್ ಬಿ. ರೈ ತಂಡಕ್ಕೆ ಗೆಲುವು 

Share the Article

Mangalore : ಪ್ರತಿಷ್ಠಿತ ಕ್ರೆಡಿಟ್ ಸಹಕಾರ ಸಂಸ್ಥೆಗಳಲ್ಲೊಂದಾದ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ಚುನಾವಣೆ ಫೆ 2 ರಂದು ಮಂಗಳೂರು ಶ್ರೀ ರಾಮಕೃಷ್ಣ ವಿದ್ಯಾಲಯದಲ್ಲಿ ನಡೆಯಿತು.

 

ಚುನಾವಣೆಯಲ್ಲಿ ಹಾಲಿ ಅಧ್ಯಕ್ಷರಾದ ಕೆ. ಜೈರಾಜ್ ಬಿ. ರೈ ಅವರ ನೇತೃತ್ವದ ಸಾಮಾನ್ಯ ಸ್ಥಾನದ ಎಲ್ಲಾ 13 ಅಭ್ಯರ್ಥಿಗಳಾದ ಕೆ. ಜೈರಾಜ್ ಬಿ. ರೈ, ಸವಣೂರು ಕೆ. ಸೀತಾರಾಮ ರೈ , ಡಾ| ಕೆ. ಸುಭಾಶ್ಚಂದ್ರ ಶೆಟ್ಟಿ, ಪಿ. ಶಿವರಾಮ ಅಡ್ಯಂತಾಯ, ಸಿಎ ಎಚ್. ಆರ್. ಶೆಟ್ಟಿ, ವಿಠಲ ಪಿ. ಶೆಟ್ಟಿ, ಯಂ. ರಾಮಯ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ರವೀಂದ್ರನಾಥ ಜಿ. ಹೆಗ್ಡೆ, ಕುಂಬ್ರ ದಯಾಕರ ಆಳ್ವ, ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಅರಿಯಡ್ಕ ಚಿಕ್ಕಪ್ಪ ನಾಯ್ಕ್ ಮತ್ತು ಡಾ. ಬಿ. ಸಂಜೀವ ರೈ ಆಯ್ಕೆಯಾಗಿದ್ದಾರೆ.

 

ಹಿಂದುಳಿದ ವರ್ಗ‘ಬಿ’ಕ್ಷೇತ್ರದಲ್ಲಿ ಪಿ. ಬಿ. ದಿವಾಕರ ರೈ ಪೆರಾಜೆ, ಶ್ರೀಮತಿ ಲಕ್ಷ್ಮೀ ಜಯಪಾಲ ಶೆಟ್ಟಿ ಮತ್ತು ಶ್ರೀಮತಿ ರತ್ನಕಾಂತಿ ಶೆಟ್ಟಿ ಮಹಿಳಾ ಕ್ಷೇತ್ರದಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ದ. ಕ. ಜಿಲ್ಲಾ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಅಧಿಕಾರಿಗಳಾದ ಸಂಘದ ಚುನಾವಣಾ ರಿಟರ್ನಿಂಗ್ ಅಧಿಕಾರಿ ಸಿ. ಆನಂದ್ ಹಾಗೂ ಸಹಾಯಕ ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್. ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.