B Y Vijayendra : ಪಕ್ಷದಿಂದ ಯತ್ನಾಳ್ ಉಚ್ಚಾಟನೆ? ಬಿಗ್ ಅಪ್ಡೇಟ್ ಕೊಟ್ಟ ವಿಜಯೇಂದ್ರ

B Y Vijayendra : ರಾಜ್ಯ ಬಿಜೆಪಿಯಲ್ಲಿ ತಮ್ಮದೇ ಒಂದು ಪ್ರತ್ಯೇಕ ಬಣವನ್ನು ಸೃಷ್ಟಿಸಿಕೊಂಡು, ರೆಬಲ್ ನಾಯಕರನ್ನು ಒಟ್ಟುಗೂಡಿಸಿಕೊಂಡು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿಜೆಪಿ ಹಾಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿ ನೋಟಿಸ್ ನೀಡಿತ್ತು. ಈ ಬೆನ್ನಲ್ಲೇ ಪಕ್ಷದಿಂದ ಯತ್ನಾಳ್ ಅವರನ್ನು ಉಚ್ಚಾಟಿಸಬೇಕೆಂಬ ಕೂಗು ಕೂಡ ಕೇಳಿಬಂದಿತ್ತು. ಇದೀಗ ಈ ಕುರಿತು ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಹೌದು, ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಬೇಕು ಎಂಬ ಕೆಲವರ ಒತ್ತಾಯದ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಯತ್ನಾಳ್ ಉಚ್ಛಾಟನೆ ಬಗ್ಗೆ ನಾನೇನೂ ಮಾತನಾಡಲ್ಲ. ಎಲ್ಲರಿಗೂ ಮುಂದೆ ಒಳ್ಳೆಯದಾಗುತ್ತದೆ. ಶೀಘ್ರದಲ್ಲಿಯೇ ಎಲ್ಲವೂ ಬಗೆಹರಿಯಲಿದೆ ಎಂದು ಹೇಳಿದರು.
Comments are closed.