Udupi: ಅಕ್ರಮವಾಗಿ ಖರೀದಿಸಿದ್ದ ಅನ್ನ ಭಾಗ್ಯದ ಅಕ್ಕಿ ವಶ

Share the Article

Udupi: ಉಡುಪಿಯ (Udupi) ಕೋಟತಟ್ಟು ಗ್ರಾಮದ ಪಡುಕೆರೆಯ ಜನರಲ್‌ ಸ್ಟೋರ್ಸ್ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನ ಭಾಗ್ಯದ ಅಕ್ಕಿಯನ್ನು ಆಹಾರ ಇಲಾಖೆಯವರು ದಾಳಿ ನಡೆಸಿ ಅಕ್ಕಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೌದು, ಶ್ರೀ ಸಾಯಿರಾಮ್‌ ಜನರಲ್‌ ಸ್ಟೋರ್ನಲ್ಲಿ ಅನ್ನ ಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಕಾನೂನು ಬಾಹಿರವಾಗಿ ಸಂಗ್ರಹಿಸಿರುವ ಬಗ್ಗೆ ಮಾಹಿತಿ ಮೇರೆಗೆ ಪೊಲೀಸರೊಂದಿಗೆ ಪಡಿತರ ಇಲಾಖೆಯವರು ದಾಳಿ ನಡೆಸಿದ್ದು, ಅಂಗಡಿಯಲ್ಲಿ ಸಂಗ್ರಹಿಸಿ ಇಟ್ಟಿದ್ದ ಅನ್ನಭಾಗ್ಯ ಮತ್ತು ಅಂತ್ಯೋದಯ ಪಡಿತರ 1,503.55 ಕೆ.ಜಿ. ಅಕ್ಕಿಯನ್ನು ಸ್ವಾಧೀನಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

Comments are closed.