Home latest Karnataka Government : ಫೆ. 20ರಂದು ರಾಜ್ಯ ಸರ್ಕಾರಿ ನೌಕರರಿಗೆ ಸಾಂದರ್ಭಿಕ ರಜೆ ಘೋಷಣೆ!!

Karnataka Government : ಫೆ. 20ರಂದು ರಾಜ್ಯ ಸರ್ಕಾರಿ ನೌಕರರಿಗೆ ಸಾಂದರ್ಭಿಕ ರಜೆ ಘೋಷಣೆ!!

Hindu neighbor gifts plot of land

Hindu neighbour gifts land to Muslim journalist

Karnataka Government : ರಾಜ್ಯ ಸರ್ಕಾರ ಮಂಗಳವಾರ ಸರ್ಕಾರಿ ನೌಕರರಿಗೆ ಫೆಬ್ರವರಿ 20ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶವನ್ನು ಹೊರಡಿಸಿದೆ. ಅಂದು ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಬೃಹತ್ ಸಮಾವೇಶ ನಡೆಯಲಿದ್ದು, 10 ಸಾವಿರಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಸಮಾವೇಶದಲ್ಲಿ ಭಾಗವಹಿಸುವ ಪ್ರತಿನಿಧಿಗಳಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ. ಈ ಕುರಿತು ವಿಮಲಾಕ್ಷಿ .ಬಿ ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಆಸು-ತಪಾಸಣೆ-ಸ್ವೀಮರ) ಸುತ್ತೋಲೆಯನ್ನು ಹೊರಡಿಸಿದ್ದಾರೆ.

 

ಆದೇಶದಲ್ಲಿ ಏನಿದೆ?

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ 20.02.2025 ರಂದು ಬೆಂಗಳೂರು ನಗರದ ಅರಮನೆ ಮೈದಾನ ಆವರಣದಲ್ಲಿ ‘ಸಮ್ಮಿಲನ ಸಮಾವೇಶ, ಕಾರ್ಯಾಗಾರ ಹಾಗೂ ಉಪನ್ಯಾಸ’ ಕಾರ್ಯಕ್ರಮವನ್ನು ಆಯೋಜಿಸಿದೆ.

 

ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂಘದ ಚುನಾಯಿತ ನಿರ್ದೇಶಕರು, ಬೆಂಗಳೂರು ನಗರ ರಾಜ್ಯ ಪರಿಷತ್‌ ಸದಸ್ಯರು ಹಾಗೂ ಪದಾಧಿಕಾರಿಗಳಿಗೆ ದಿನಾಂಕ 20.02.2025 ರಂದು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಷರತ್ತಿಗೊಳಪಟ್ಟು ಮಂಜೂರು ಮಾಡಲಾಗಿದೆ ಎಂದು ಹೇಳಿದೆ.

 

2024-29ನೇ ಅವಧಿಗೆ ಆಯ್ಕೆಯಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು ಹಾಗೂ ಪದಾಧಿಕಾರಿಗಳು ಪೂರ್ವಾನುಮತಿಯನ್ನು ಪಡೆಯಬೇಕು. ಈ ಆಧಾರದ ಮೇಲೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಕಾರವುಳ್ಳ ಅಧಿಕಾರಿಗಳು ಮಂಜೂರು ಮಾಡತಕ್ಕದ್ದು ಎಂದು ಸ್ಪಷ್ಟಪಡಿಸಲಾಗಿದೆ.