SSLC, Puc Exam: ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

Share the Article

SSLC. Puc Exam: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆ – 1 ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಬಿಎಂಟಿಸಿ ಬಸ್‌ನಲ್ಲಿ ಉಚಿತವಾಗಿ ಸಂಚಾರ ಮಾಡಲು ಅವಕಾಶ ಕಲ್ಪಿಸಲಾಗಿದೆ.

ದ್ವಿತೀಯ ಪಿಯು ಪರೀಕ್ಷೆ-1 ಮಾರ್ಚ್‌ 1 ರಿಂದ 20 ರವರೆಗೆ ಹಾಗೂ ಮಾರ್ಚ್‌ 21 ರಿಂದ ಎಪ್ರಿಲ್‌ 4 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ನಡೆಯಲಿದೆ. ಪರೀಕ್ಷೆಗಳು ನಡೆಯುವ ದಿನದಂದು ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ತೆರಳುವ ಮತ್ತು ಅಲ್ಲಿಂದ ಹಿಂದಿರುಗುವ ವೇಳೆ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರಗಳನ್ನು ತೋರಿಸಿ ಪ್ರಯಾಣ ಮಾಡಬಹುದು.

ಸಂಸ್ಥೆಯ ಸಾಮಾನ್ಯ ಸೇವಾ ಬಸ್‌ಗಳಲ್ಲಿ ಮಾತ್ರ ಈ ಸೌಲಭ್ಯ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳಿರುವ ಎಲ್ಲ ಮಾರ್ಗಗಳಲ್ಲಿ ಕಡ್ಡಾಯವಾಗಿ ಬಸ್‌ಗಳು ಸಂಚಾರ ಮಾಡಲಿದೆ. ಹೆಚ್ಚುವರಿ ಟ್ರಿಪ್‌ಗಳನ್ನು ಕೂಡಾ ಅಗತ್ಯವಿದ್ದರೆ ಕಾರ್ಯಾಚರಿಸಲಾಗುವುದು ಎಂದು ಬಿಎಂಟಿಸಿ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.