Udupi: ಉಡುಪಿ : ಮೀನುಗಾರಿಕಾ ಬೋಟ್‌ಗೆ ಬೆಂಕಿ: ಲಕ್ಷಾಂತರ ರೂ.ನಷ್ಟ

Udupi: ಮಲ್ಪೆಯ (Udupi) ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಸೇತುವೆ ಪಕ್ಕದ ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟಿನಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡು, ಬೋಟು ಸಂಪೂರ್ಣ ಸುಟ್ಟು ಹೋದ ಘಟನೆ ನಡೆದಿದೆ.

ಮಲ್ಪೆಯ ಜನಾರ್ದನ ಟಿ. ಕಾಂಚನ್ ಎಂಬವರಿಗೆ ಸೇರಿದ ‘ರವಿಪ್ರಕಾಶ್’ ಎಂಬ ಸಣ್ಣಟ್ರಾಲ್ (ಫಿಶಿಂಗ್) ಬೋಟಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಕಾಣಿಸಿಕೊಂಡ ಬೋಟಿನ ಸುತ್ತ ಸುಮಾರು 25ರಿಂದ 30 ಬೋಟುಗಳು ನಿಂತಿದ್ದರೂ, ಸಮುದ್ರದ ನೀರಿನ ಉಬ್ಬರ ಇತರ ಯಾವುದೇ ಬೋಟಿಗೆ ಬೆಂಕಿ ತಗಲದಿರಲು ಕಾರಣವಾಯಿತೆನ್ನಲಾಗಿದೆ. ಬೆಂಕಿಗಾಹುತಿಯಾದ ಬೋಟಿನಲ್ಲಿ ಬಲೆ, 200 ಲೀ. ಡಿಸೇಲ್, ಜಿಪಿಎಸ್, ಫಿಶ್ ಫೈಂಡರ್, ಲೈಫ್ ಜಾಕೆಟ್, ವಾಟರ್ ಟ್ಯಾಂಕರ್, ಬಾಕ್ಸ್ ಇದ್ದು, ಸುಮಾರು 15 ಲಕ್ಷ ರೂ.ಗಳಷ್ಟು ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
Comments are closed.