Meena Thoogudeepa: ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ನಟ ದರ್ಶನ್ ತಾಯಿ ಭೇಟಿ

Meena Thoogudeepa: ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ನಟ ದರ್ಶನ್ ತಾಯಿ ಮೀನಾ ತೂಗುದೀಪ ಭೇಟಿ ಮಾಡಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಚನ್ನಪಟ್ಟಣ ತಾಲೂಕಿನ ಗೌಡಗೆರೆ ಗ್ರಾಮದಲ್ಲಿರುವ 60 ಅಡಿ ಎತ್ತರದ ಚಾಮುಂಡೇಶ್ವರಿ ವಿಗ್ರಹದ ದೇವಾಲಯದಲ್ಲಿ ಬಸಪ್ಪನ ಆಶೀರ್ವಾದ ಪಡೆದು ಮಗನ ಕಷ್ಟ ನಿವಾರಣೆ ಮಾಡುವಂತೆ ಪವಾಡ ಬಸಪ್ಪನ ಬಳಿ ಪ್ರಾರ್ಥನೆ ಮಾಡಿದ್ದಾರೆ. ಮೀನಾ ತೂಗುದೀಪಗೆ ಪವಾಡ ಬಸಪ್ಪ ತನ್ನ ಬಲಗಾಲನ್ನು ಕೊಟ್ಟು ಆಶೀರ್ವಾದ ಮಾಡಿದೆ.
ಚಾಮುಂಡೇಶ್ವರಿ ಈ ಕ್ಷೇತ್ರದಲ್ಲಿ ನೆಲೆಸಿದ್ದಾಳೆ. ಎಲ್ಲಾ ಕಡೆ ಪಾಸಿಟಿವ್ ಎನರ್ಜಿ ಇದೆ. ಇಲ್ಲಿಗೆ ಬರುವ ಎಲ್ಲಾ ಭಕ್ತರಿಗೆ ಚಾಮುಂಡೇಶ್ವರಿ ಒಳ್ಳೆಯದು ಮಾಡಲಿ ಎಂದು ಮೀನಾ ತೂಗುದೀಪ ಅವರು ಹೇಳಿದ್ದಾರೆ.
Comments are closed.