B S Yediyurappa: ಪೋಕ್ಸೋ ಕೇಸ್; ಯಡಿಯೂರಪ್ಪಗೆ ಸಂಕಷ್ಟ

B S Yediyurappa: ಪೋಕ್ಸೋ ಕೇಸ್‌ನಲ್ಲಿ ಮಾಜಿ ಸಿಎಂ ಬಿಎಸ್‌ವೈಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಮಾ.15 ರಂದು ಖುದ್ದಾಗಿ ಹಾಜರಾಗಲು ಕೋರ್ಟ್ ಸಮನ್ಸ್ ನೀಡಿದೆ.

ಬಿಎಸ್ ಯಡಿಯೂರಪ್ಪ ಮತ್ತು ಇತರೆ ಆರೋಪಿಗಳಿಗೆ ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಪೋಕ್ಸೋ ಕೇಸ್‌ನಲ್ಲಿ ಇತ್ತೀಚೆಗಷ್ಟೇ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಯಡಿಯೂರಪ್ಪನನ್ನು ಬಂಧಿಸದಂತೆ ಸೂಚನೆ ನೀಡಿತ್ತು. ನಂತರ ಈ ವಿಚಾರಣೆಯನ್ನು ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿತ್ತು. 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನು ಆರೋಪದಡಿ ಪೋಕ್ಸೋ ಕೇಸ್ ದಾಖಲಾಗಿತ್ತು.
ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಸರಕಾರ ಈ ಕೇಸನ್ನು ಸಿಐಡಿಗೆ ವಹಿಸಿತ್ತು.
Comments are closed.