Shiradi Ghat: ಮಾ. 15 ರಿಂದ ಒಂದು ತಿಂಗಳು ಶಿರಾಡಿ ಘಾಟ್ ಬಂದ್!!

Share the Article

Shiradi Ghat: ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 15 ರಿಂದ ಒಂದು ತಿಂಗಳುಗಳ ಕಾಲ ಶಿರಾಡಿ ಘಾಟ ಬಂದಾಗಲಿದೆ.

ಹೌದು, ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ. 30 ರೊಳಗೆ ಪೂರ್ಣಗೊಳಿಸಲು ನಿರ್ಧರಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಕನಿಷ್ಠ ಒಂದು ತಿಂಗಳು ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲು ಪ್ರಸ್ತಾವನೆ ಸಲ್ಲಿಸಿದ್ದು ಇದಕ್ಕೆ ಹಾಸನ ಜಿಲ್ಲಾಡಳಿತವು ಸ್ಪಂದಿಸಿದ್ದು ಮಾರ್ಚ್ 15 ರಿಂದ ರಸ್ತೆ ಸಂಚಾರವನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.

ಅಂದಹಾಗೆ ಸಕಲೇಶಪುರದ ದೋಣಿಗಾಲ್‌ ಕ್ರಾಸ್‌ನಿಂದ ಮಾರನಹಳ್ಳಿವರೆಗೆ 10 ಕಿ.ಮೀ. ಚತುಷ್ಪಥ ಕಾಂಕ್ರೀಟ್‌ ರಸ್ತೆ ನಿರ್ಮಾಣದಲ್ಲಿ ಈ ವರೆಗೆ 4.8 ಕಿ.ಮೀ. ರಸ್ತೆ ನಿರ್ಮಾಣ ಆಗಿದೆ. ಭೂ ಕುಸಿತವಾಗುವ ಸಂಭಾವ್ಯ ಸ್ಥಳದಲ್ಲಿ ರಸ್ತೆ ಜತೆ ತಡೆಗೋಡೆ ನಿರ್ಮಿಸಲಾಗುವುದು ಎಂದು ಎನ್‌ಎಚ್‌ಎಐ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಶಿರಾಡಿ ಘಾಟಿಯಲ್ಲಿ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಗುರುತಿಸಲಾಗಿದೆ.

Comments are closed.