Rajasthan: ಪರೀಕ್ಷೆ ಬರೆಯುವಾಗಲೇ ಹೆರಿಗೆ ನೋವು; ಹೆಣ್ಣು ಮಗು ಜನನ

Rajasthan: ರಾಜಸ್ಥಾನದ ಟೊಂಕ್ ಜಿಲ್ಲೆಯಲ್ಲಿ REET ಪರೀಕ್ಷೆಗೆ ಹಾಜರಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ಪರೀಕ್ಷೆ ನಡೆಯುತ್ತಿದ್ದಾಗಲೇ ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬಾಗಡಿ ಗ್ರಾಮದ ನಿವಾಸಿ ಪ್ರಿಯಾಂಕಾ ಚೌಧರಿ ಎಂಬುವವರು ಫೆ.27 ರಂದು ಸರಕಾರಿ ಪ್ರೌಢಶಾಲೆಯಲ್ಲಿ ಪರೀಕ್ಷೆ ಪ್ರಾರಂಭವಾದ ಸ್ವಲ್ಪ ಹೊತ್ತಿನಲ್ಲಿಯೇ ಹೆರಿಗೆ ನೋವು ಕಾಣಿಸಿಕೊಂಡಿತ್ತು.

ಕೂಡಲೇ ಪರೀಕ್ಷಾ ಅಧೀಕ್ಷಕರು ಜಿಲ್ಲಾಡಳಿತಕ್ಕೆ ಮಾಹಿತಿಯನ್ನು ನೀಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಿದ್ದಿದ್ದಾರೆ. ಅಲ್ಲಿ ಅವರು ಸುರಕ್ಷಿತವಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಹೆರಿನೋವು ಇದ್ದಕ್ಕಿದ್ದಂತೆ ಕಾಣಿಸಿಕೊಂಡಿದ್ದರಿಂದ ಪರೀಕ್ಷೆಯನ್ನು ಪೂರ್ಣಗೊಳಿಸಲು ಆಗಿಲ್ಲ. ಇದರಿಂದ ಪ್ರಿಯಾಂಕಾ ಸ್ವಲ್ಪ ನಿರಾಶೆಗೊಂಡಿದ್ದಾರೆ. ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಆಡಳಿತ ಹೇಳಿದೆ.
Comments are closed.