Madikeri: ಇಂದು ಕೊಡಗಿನಲ್ಲಿ ಅರೆಭಾಷೆ ಗಡಿನಾಡ ಉತ್ಸವ!

Madikeri: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಗೌಡ ಸಮಾಜ ಕುಶಾಲನಗರ ಮತ್ತು ಇದರ ಅಂಗ ಸಂಸ್ಥೆಗಳು ಮತ್ತು ಆಲೂರು ಸಿದ್ದಾಪುರ, ಸುಂಟಿಕೊಪ್ಪ, ಗುಡ್ಡೆಹೊಸೂರು, ನಂಜರಾಯಪಟ್ಟಣ, ಚೆಟ್ಟಳ್ಳಿ ಮತ್ತು ಪಿರಿಯಾಪಟ್ಟಣ ಗೌಡ ಸಮಾಜ ಇವರ ಸಹಯೋಗದಲ್ಲಿ ಅರೆಭಾಷೆ ಗಡಿನಾಡ ಉತ್ಸವವು ಮಾರ್ಚ್, 02 ರಂದು ಅಂದರೆ ಇಂದು ನಡೆಯಲಿದೆ.

ಬೆಳಗ್ಗೆ ಕೊಪ್ಪ ಗೇಟ್ ಕಾವೇರಿ ಪ್ರತಿಮೆ ಬಳಿಯಿಂದ ಮೆರವಣಿಗೆ ನಡೆಯಲಿದೆ. ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ ಅವರು ಚಾಲನೆ ನೀಡಲಿದ್ದಾರೆ. ನಂತರ ಕುಶಾಲನಗರ ರೈತ ಸಹಕಾರ ಭವನದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಭಾಪತಿ ಕೆ.ಜಿ.ಬೋಪಯ್ಯ, ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಇತರರು ಪಾಲ್ಗೊಳ್ಳಲಿದ್ದಾರೆ. ನಂತರ ಅರೆಭಾಷೆ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಮಾರೋಪ ಸಮಾರಂಭವು ನಡೆಯಲಿದೆ.
Comments are closed.