Home News ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಆಯ್ಕೆ

ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಆಯ್ಕೆ

Hindu neighbor gifts plot of land

Hindu neighbour gifts land to Muslim journalist

Putturu: ಆರ್ಯಾಪು ಗ್ರಾಮದ ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮುಂದಿನ ಮೂರು ವರ್ಷಗಳ ಅವಧಿಗೆ ಸದಸ್ಯರನ್ನು ನೇಮಕಗೊಳಿಸಲಾಗಿದೆ. ನೂತನ ವ್ಯವಸ್ಥಾಪ ಸಮಿತಿಯ ಅಧ್ಯಕ್ಷರಾಗಿ ನ್ಯಾಯವಾದಿಗಳು, ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿರುವ ಜಗನ್ನಾಥ ರೈ ಆಯ್ಕೆಯಾಗಿದ್ದಾರೆ.

ನೂತನ ಸಮಿತಿಯ ಸದಸ್ಯರಾಗಿ ಅರ್ಚಕ ಸ್ಥಾನದಿಂದ ಪ್ರಧಾನ ಅರ್ಚಕ ಸದಾನಂದ ರವಿ, ಪ.ಜಾತಿ/ಪ.ಪಂಗಡದಿಂದ ಎ.ಐತ್ತಪ್ಪ ನಾಯ್ಕ ವಳತ್ತಡ್ಕ, ಮಹಿಳಾ ಸ್ಥಾನದಿಂದ ಅನುರಾಧ ಸಿ.ಎಚ್‌ ಕುಂಜೂರುಪಂಜ, ರಕ್ಷಾ ಬಾಲಕೃಷ್ಣ ಶೆಟ್ಟಿ ಕುಕ್ಕಾಡಿ, ಸಾಮಾನ್ಯ ಸ್ಥಾನದಿಂದ ಮಾಜಿ ಸದಸ್ಯ ಚಂದಪ್ಪ ಪೂಜಾರಿ ಕುಂಜೂರು, ನಿವೃತ್ತ ಶಿಕ್ಷಕ ರಾಧಾಕೃಷ್ಣ ಕಲ್ಲೂರಾಯ ರಾಜಹಂಸ ಪಿಲಿಗುಂಡ, ಅಭಿಲಾಷ್ ರೈ ಬಂಗಾರಡ್ಕ, ದಾಮೋದರ ಗೌಡ ಗೆಣಸಿನಕುಮೇರು ಹಾಗೂ ನ್ಯಾಯವಾದಿ ಜಗನ್ನಾಥ ರೈ ಗೆಣಸಿನಕುಮೇರುರವರನ್ನು ನೇಮಕಗೊಳಿಸಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯ ಕಾರ್ಯದರ್ಶಿಗಳು ಆದೇಶಿಸಿದ್ದಾರೆ.

ಮಾ.1ರಂದು ದೇವಸ್ಥಾನದಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್‌ ಸದಸ್ಯ ಶಿವನಾಥ ರೈ ಮೇಗಿನಗುತ್ತುರವರ ಉಪಸ್ಥಿತಿಯಲ್ಲಿ ನಡೆದ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ಅಧ್ಯಕ್ಷರನ್ನಾಗಿ ಜಗನ್ನಾಥ ರೈಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸದಸ್ಯರಾದ ರಾಧಾಕೃಷ್ಣ ಕಲ್ಲೂರಾಯ ಸೂಚಿಸಿ, ಅನುರಾಧ ಅನುಮೋದಿಸಿದರು. ಆಡಳಿತಾಧಿಕಾರಿಯಾಗಿದ್ದ ಉಪತಹಶೀಲ್ದಾರ್ ರವಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಜಿಲ್ಲಾ ಧಾರ್ಮಿಕ ಪರಿಷತ್‌ ಸದಸ್ಯ ಶಿವನಾಥ ರೈ ಮೇಗಿನಗುತ್ತು ಹಾಗೂ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಬಲ ರೈ ವಳತ್ತಡ್ಕ ಮಾತನಾಡಿ, ನೂತನ ಸಮಿತಿಯವರಿಗೆ ಅಭಿನಂದನೆ ಸಲ್ಲಿಸಿ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿಯವರ ಕೆಲಸ ಕಾರ್ಯಗಳು, ಜವಾಬ್ದಾರಿಗಳ ಬಗ್ಗೆ ತಿಳಿಸಿದರು. ಹಿರಿಯ ಅರ್ಚಕ ಎಚ್.ಕೇಶವ ಭಟ್, ಬಾಲಕೃಷ್ಣ ಶೆಟ್ಟಿ ಕುಕ್ಕಾಡಿ ಮೊದಲಾದವರು ಉಪಸ್ಥಿತರಿದ್ದರು