KANGANA RANAUT: ಬಾಲಿವುಡ್ ನಟಿ ಕಂಗನಾ ರಣಾವತ್ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ!

KANGANA RANAUT: ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ (KANGANA RANAUT) ಕಾಪು ಮಾರಿಯಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಕಾಪು ಕ್ಷೇತ್ರದಲ್ಲಿ ಬಹುಕೋಟಿ ವೆಚ್ಚದಲ್ಲಿ ಮರು ನಿರ್ಮಾಣಗೊಂಡಿರುವ ಮಾರಿಯಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿದ ಮಂಡಿ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಅವರಿಗೆ ಶಾಲು ಹೊದಿಸಿ ಸ್ವಾಗತಿಸಲಾಯಿತು. ದೇವರ ದರ್ಶನದ ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ಕಂಗನಾ ಭಾಗವಹಿಸಿದರು. ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಪಸ್ಥಿತರಿದ್ದರು.
Comments are closed.