Karnataka Government : ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ – ರಾಜ್ಯ ಸರ್ಕಾರದಿಂದ ನಿರ್ಧಾರ

Share the Article

Karnataka Government : ರಾಜ್ಯ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂಬುದಾಗಿ ತಿಳಿದು ಬಂದಿದೆ. ಅಷ್ಟೇ ಅಲ್ಲದೆ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಸಂಪುಟ ಸಭೆಯಲ್ಲಿ ಈ ವಿಧೇಯಕ ಮಂಡನೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಗಿದೆ.

ಉಪಚುನಾವಣೆ ವೇಳೆ ಇದನ್ನು ಜಾರಿಗೆ ತರಲು ಸರ್ಕಾರ ಸಿದ್ದತೆ ನಡೆಸಿತ್ತು, ಆದರೆ ವ್ಯಾಪಕ ವಿರೋಧದ ಹಿನ್ನೆಲೆ ಇದನ್ನು ಸರ್ಕಾರ ಮುಂದೂಡಿತ್ತು. ಇದೀಗ ಜಾರಿಗೆ ತರಲು ನಿರ್ಧರಿಸಿದೆ ಎನ್ನಲಾಗಿದೆ. ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಈ ಮೀಸಲಾತಿ ಮಸೂದೆ ಮಂಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

Comments are closed.