Bengaluru : ಮನೆ ಕಟ್ಟಲು ನೀಡುತ್ತಿದ್ದ ಸಬ್ಸಿಡಿ ಹಣ ಹೆಚ್ಚಳ!!

Bengaluru : ರಾಜ್ಯ ಸರ್ಕಾರವು ಜನರು ಮನೆ ಕಟ್ಟಿಕೊಳ್ಳಲು ನೀಡುತ್ತಿದ್ದ ಸಬ್ಸಿಡಿ ಹಣವನ್ನು ಹೆಚ್ಚಳ ಮಾಡಲು ತೀರ್ಮಾನಿಸಿದೆ. ಈ ಕುರಿತಾಗಿ ಮುಂದಿನ ಬಜೆಟ್ ನಲ್ಲಿ ಸರ್ಕಾರ ಅಧಿಕೃತ ಘೋಷಣೆ ಮಾಡಲಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

ವಿಧಾನಪರಿಷತ್ ಕಲಾಪದ ವೇಳೆ ಕಾಂಗ್ರೆಸ್ ಶಾಸಕ ಅನಿಲ್ ಕುಮಾರ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ವಸತಿ ಯೋಜನೆಗಳಡಿ ಮನೆಗಳಿಗೆ ನೀಡಲಾಗುತ್ತಿರುವ ಸಬ್ಸಿಡಿ ಹಣವನ್ನು ಹೆಚ್ಚಿಸಲು ಈಗಾಗಲೇ ತೀರ್ಮಾನವಾಗಿದೆ. ಈ ಬಗ್ಗೆ ಬಜೆಟ್ನಲ್ಲಿ ನಮ್ಮ ಸರ್ಕಾರ ಘೋಷಿಸಲಿದೆ ಎಂದು ಹೇಳಿದ್ದಾರೆ.
ಈ ಕುರಿತಾಗಿ ಮಾಹಿತಿ ನೀಡಿದ ಸಚಿವರು ಸಾಮಾನ್ಯ ವರ್ಗದ ಲಾನುಭವಿಗಳಿಗೆ ನೀಡಲಾಗುತ್ತಿದ್ದ 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ, ಪರಿಶಿಷ್ಟ ಜಾತಿ(ಎಸ್ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್ಟಿ)ದ ಫಲಾನುಭವಿಗೆ ನೀಡಲಾಗುತ್ತಿದ್ದ 1.60 ಲಕ್ಷ ರೂ.ನಿಂದ 3.5 ಲಕ್ಷ ರೂ.ಗೆ ಸಬ್ಸಿಡಿ ಮೊತ್ತವನ್ನು ಏರಿಸಲಾಗುವುದು. ಇದರಿಂದಾಗಿ ಬಡವರಿಗೆ ಅನುಕೂಲವಾಗಲಿದೆ. ಪೂರ್ತಿಯಾಗದ 9 ಲಕ್ಷ ಮನೆಗಳನ್ನು ಅದಷ್ಟೂ ಬೇಗ ಪೂರ್ಣಗೊಳಿಸುವಂತೆ ಕಳೆದ ವರ್ಷ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಈ ವರ್ಷ ಸಬ್ಸಿಡಿ ಮೊತ್ತ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದರು.
Comments are closed.