Marathon: ಮಾ.9ರಂದು ಪೊಲೀಸರಿಂದ ಮ್ಯಾರಥಾನ್!

Share the Article

Marathon: ಪೊಲೀಸ್ ಇಲಾಖೆ ವತಿಯಿಂದ ‘ಫಿಟ್‍ನೆಸ್ ಫಾರ್ ಆಲ್’ ಎಂಬ ಧ್ಯೇಯದೊಂದಿಗೆ ಸಮಾಜದ ಆರೋಗ್ಯ ಕಾಪಾಡುವ ಸಂದೇಶದೊಂದಿಗೆ ಹಾಗೂ ಮಾದಕ ಮುಕ್ತ ಕರ್ನಾಟಕ ನಿರ್ಮಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲು ‘ಕರ್ನಾಟಕ ರಾಜ್ಯ ಪೊಲೀಸ್’ ಇಲಾಖಾ ವತಿಯಿಂದ ಮಾರ್ಚ್, 9 ರಂದು ‘ಮ್ಯಾರಥಾನ್ (Marathon) ಓಟ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಕೇಂದ್ರಸ್ಥಾನದಲ್ಲಿ ನಡೆಯಲಿದೆ.

ಅದರಂತೆ ಕೊಡಗು ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ಮಾರ್ಚ್ 9 ರಂದು ಬೆಳಗ್ಗೆ 8 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಪ್ರಾರಂಭಿಸಿ ನಗರದ ಹಳೆಯ ಬಸ್ಸು ನಿಲ್ದಾಣ, ಐ.ಜಿ.ವೃತ್ತ, ಮಾರ್ಗವಾಗಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದವರೆಗೆ ಮ್ಯಾರಥಾನ್ ಓಟ ನಡೆಯಲಿದೆ ಎಂದು ಎಂದು ಸಂಚಾರಿ ಪೊಲೀಸ್ ಠಾಣೆ ಠಾಣಾಧಿಕಾರಿ ಅವರು ತಿಳಿಸಿದ್ದಾರೆ.

Comments are closed.