Bengaluru: ಹಾಡಹಗಲೇ ಮಹಿಳೆ ಸರ ಕಸಿದು ಪರಾರಿ! ಸಿಸಿ ಟಿವಿ ವಿಡಿಯೋ ವೈರಲ್!

Share the Article

Bengaluru: ಬೆಂಗಳೂರಿನ (Bengaluru) ಉಲ್ಲಾಳದ ಉಪಕಾರ್ ಲೇಔಟ್‌ನಲ್ಲಿ ಮಾರ್ಚ್ 3ರಂದು ಇಬ್ಬರು ಮಹಿಳೆಯರು ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅವರಲ್ಲೊಬ್ಬರ ಸರ ಕಸಿದು ಪರಾರಿಯಾಗಿದ್ದಾರೆ. ಈ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸರ ಕದಿಯುವಾಗ ಮಹಿಳೆ ಬಿದ್ದಿದ್ದು, ಇದರಿಂದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಬೆಂಗಳೂರಿನಲ್ಲಿ ಇತ್ತೀಚೆಗೆ ಇಂತಹ ಘಟನೆಗಳು ಹೆಚ್ಚಾಗುತ್ತಿದ್ದು, ಮಹಿಳೆಯರ ಸುರಕ್ಷತೆಗೆ ಧಕ್ಕೆಯಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಳ್ಳರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Comments are closed.