Home News BJP: ಜನಾರ್ದನ ರೆಡ್ಡಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ?

BJP: ಜನಾರ್ದನ ರೆಡ್ಡಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ?

Hindu neighbor gifts plot of land

Hindu neighbour gifts land to Muslim journalist

BJP: ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷರ ಬದಲಾವಣೆ ವಿಚಾರ ದೊಡ್ಡದಾಗಿ ಸದ್ದು ಮಾಡುತ್ತಿದೆ. ಬಿಜೆಪಿ ನಾಯಕ ಯತ್ನಾಳ್ ಹಾಗೂ ಹಾಲಿ ಅಧ್ಯಕ್ಷ ವಿಜಯೇಂದ್ರ ಅವರ ಬಣಗಳು ಅಧ್ಯಕ್ಷ ಗಾದಿಗೆ ಕಣ್ಣಿಟ್ಟಿದ್ದು ಆರೋಪ, ಪ್ರತ್ಯಾರೋಪಗಳ ಮಳೆಯನ್ನೇ ಸುರಿಸುತ್ತಿದ್ದಾರೆ. ಹೈಕಮಾಂಡ್ ಎಂಟ್ರಿಯಾದರೂ ಕೂಡ ರಾಜ್ಯದ ರೆಬೆಲ್ ಬಿಜೆಪಿ ನಾಯಕರು ಸುಮ್ಮನಾದಂತೆ ಕಾಣುತ್ತಿಲ್ಲ. ಈ ನಡುವೆಯೇ ಈ ಎಲ್ಲಾ ಸಮಸ್ಯೆಗಳಿಗೆ ಅಂತ್ಯ ಹಾಡಲು ಸ್ವತಹ ಕೇಂದ್ರ ಗೃಹ ಸಚಿವ ಬಿಜೆಪಿ ನಾಯಕ ಅಮಿತ್ ಶಾ ಅವರ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಬೆನ್ನಲ್ಲೇ ಗಾಲಿ ಜನಾರ್ದನ ರೆಡ್ಡಿಗೆ ಬಿಜೆಪಿ ಅಧ್ಯಕ್ಷ ಪಟ್ಟ ಫಿಕ್ಸ್ ಎನ್ನಲಾಗುತ್ತಿದೆ.

ಬಿಜೆಪಿ ಹೈಕಮಾಂಡ್‌ ನಾಯಕ ಅಮಿತ್ ಶಾ ಅವರು ಬೆಂಗಳೂರಿಗೆ ಭೇಟಿ ನೀಡಿರುವ ಸಂದರ್ಭದಲ್ಲಿ ಮಹತ್ವದ ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಹಲವು ನಾಯಕರು ಅಮಿತ್‌ ಶಾರನ್ನು ಭೇಟಿಗೆ ತುದಿಗಾಲಲ್ಲಿ ನಿಂತಿದ್ದರು. ಆದರೆ, ಜನಾರ್ದನ ರೆಡ್ಡಿ ಶಾ ಅವರನ್ನು ಭೇಟಿಯಾಗಿ ಗೌಪ್ಯ ಚರ್ಚೆ ನಡೆಸಿದ್ದಾರೆ ಎಂಬ ವಿಚಾರ ಸಂಚಲನ ಸೃಷ್ಟಿಸಿದೆ. ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ನಿನ್ನೆ ಕರ್ನಾಟಕ ಬಿಜೆಪಿ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಅವರ ಮೂಲಕ ಅಮಿತ್ ಶಾ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಇದು ರಾಜ್ಯ ರಾಜಕಾರಣಿಗಳಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ರೆಡ್ಡಿ ಸುಲಭವಾಗಿ ಅಮಿತ್‌ ಶಾ ಅವರನ್ನು ಭೇಟಿಯಾಗಿ ಚರ್ಚೆಯೂ ನಡೆಸಿರುವುದು ಬಿಜೆಪಿಯಲ್ಲೇ ಹೊಸ ಚರ್ಚೆಗಳನ್ನು ಮುಂದಿಟ್ಟಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ರೇಸ್‌ಗೆ ಜನಾರ್ದನ ರೆಡ್ಡಿಯೂ ಇಳಿದಿದ್ದಾರಾ? ಎಂಬ ಚರ್ಚೆಯೂ ನಡೆಯುತ್ತಿದೆ.