Death Threat: ಮದರಸಾದಲ್ಲಿ ಬಾಲಕಿ ಮೇಲೆ ಹಲ್ಲೆ ಪ್ರಕರಣ; ದೂರು ಕೊಟ್ಟ ಪೋಷಕರಿಗೆ ಕೊಲೆ ಬೆದರಿಕೆ!

Death Threat: ಬೆಂಗಳೂರಿನ ಮದರಸಾದಲ್ಲಿ ಬಾಲಕಿ ಮೇಲೆ ಹಲ್ಲೆ ಆರೋಪ ಪ್ರಕರಣದಲ್ಲಿ ಹಲ್ಲೆ ಮಾಡಿದ ವ್ಯಕ್ತಿ ವಿರುದ್ಧ ದೂರು ಕೊಟ್ಟ ಪೋಷಕರಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಕುರಿತು ವರದಿಯಾಗಿದೆ. ಹಲ್ಲೆ ವಿಚಾರ ಕುರಿತು ಕೇಸ್ ವಾಪಸ್ ಪಡೆದುಕೊಳ್ಳಬೇಕು. ಇಲ್ಲವಾದರೆ ಕೊಲೆ ಮಾಡುವುದಾಗಿ ಮದರಸಾದವರು ಫೋನ್ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತರು ಆರೋಪ ಮಾಡಿದ್ದಾರೆ.

ಈ ಕುರಿತು ಸಂತ್ರಸ್ತರ ಬಾಲಕಿಯ ತಾಯಿ ಯಶವಂತಪುರ ಠಾಣೆಗೆ ದೂರನ್ನು ನೀಡಿದ್ದಾರೆ. ದೂರಿನನ್ವಯ ಯಶವಂತಪುರ ಠಾಣೆ ಪೊಲೀಸರು ಎನ್ಸಿಆರ್ ದಾಖಲು ಮಾಡಿಕೊಂಡಿದ್ದಾರೆ.
ಹಸನ್ ಎಂಬಾತ ಕೆಲ ದಿನಗಳ ಹಿಂದೆ ಮದರಸಾದಲ್ಲಿ ಹೆಣ್ಣು ಮಕ್ಕಳ ಮೇಲೆ ಹಲ್ಲೆ ಮಾಡಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
Comments are closed.