IMD ಯಿಂದ ಸೂಚನೆ; 18 ರಾಜ್ಯದಲ್ಲಿ 5 ದಿನ ಭಾರೀ ಮಳೆ

Rain Alert: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಹವಾಮಾನದಲ್ಲಿ ದಿಢೀರ್ ಬದಲಾವಣೆಯಾಗಿದೆ. ಪರಿಣಾಮ, ಉತ್ತರ ಮತ್ತು ದಕ್ಷಿಣ ಹಲವು ರಾಜ್ಯಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಇರಾಕ್ ಭಾಗದಲ್ಲಿ ಚಂಡಮಾರುತ ರೂಪುಗೊಂಡಿದ್ದು, ನಿಧಾನವಾಗಿ ಉತ್ತರ ಭಾರತದ ಪರ್ವತದಂಚಿನ ರಾಜ್ಯಗಳ ಮೇಲೆ ಪ್ರಭಾವ ಬೀರಲಿದೆ. ಪರಿಣಾಮ ಉತ್ತರ ಭಾರತದ ಹಲವೆಡೆ ಮಳೆಯಾಗಲಿದೆ.

ಮಾ.15 ರವರೆಗೂ ಈಶಾನ್ಯದ ರಾಜ್ಯಗಳಲ್ಲಿ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಇದೇ ವೇಳೆ ಬಂಗಾಳ ಕೊಲ್ಲಿಯಲ್ಲಿ 2ನೇ ಚಂಡಮಾರುತ ರೂಪುಗೊಳ್ಳುತ್ತಿದ್ದು, ಪೂರ್ವ ಮತ್ತು ಈಶಾನ್ಯ ರಾಜ್ಯಗಳಲ್ಲಿ ಮಾ.15 ರವರೆಗೆ ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಗುಡುಗು, ಹಿಮಪಾತ ಸಹಿತ ಮಳೆ ನಿರೀಕ್ಷಿಸಬಹುದಾಗಿದೆ.
ಕೇರಳದಿಂದ ತಮಿಳುನಾಡುವರೆಗೂ ಮಳೆ ಸಾಧ್ಯತೆ ಇದೆ. ದಕ್ಷಿಣ ತಮಿಳುನಾಡಿನ 4 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆಯಿದೆ. ಮಾ.11ರಿಂದ 13 ರವರೆಗೆ ಕೇರಳ, ಮಾಹೆಯಲ್ಲಿ ಭಾರಿ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Comments are closed.