Home News Karnataka Government : ಹೆತ್ತವರನ್ನು ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ, ವಿಲ್ ಬರೆದಿದ್ದರೂ ಕ್ಯಾನ್ಸಲ್ –...

Karnataka Government : ಹೆತ್ತವರನ್ನು ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ, ವಿಲ್ ಬರೆದಿದ್ದರೂ ಕ್ಯಾನ್ಸಲ್ – ರಾಜ್ಯದಲ್ಲಿ ಜಾರಿಯಾಯಿತು ಹೊಸ ಕಾನೂನು

Hindu neighbor gifts plot of land

Hindu neighbour gifts land to Muslim journalist

Karnataka Government : ಇಂದು ಎಲ್ಲೆಡೆ ವೃದ್ಧಾಶ್ರಮಗಳು ಹೆಚ್ಚುತ್ತಿದೆ. ಸಾಕಿ ಸಲಹಿದ ತಂದೆ ತಾಯಿಗಳನ್ನು ಮಕ್ಕಳು ವಯಸ್ಸಿಗೆ ಬಂದ ನಂತರ ಕೀಳಾಗಿ ಕಾಣುವುದು, ಕೆಟ್ಟ ರೀತಿಯಲ್ಲಿ ನಡೆಸಿಕೊಳ್ಳುವುದು, ಬೀದಿಗೆ ತಳ್ಳುವುದು, ಯಾವ ಕರುಣೆ, ಕನಿಕರ, ಹೆತ್ತ ಕರುಳಿನ ಸಂಬಂಧವಿಲ್ಲದೆ ಬೇಕಾಬಿಟ್ಟಿ ನೋಡಿಕೊಳ್ಳುವಂತಹ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಇದರ ನಡುವೆ ಕೆಲವು ನೀಚ ಮಕ್ಕಳು ಹೆತ್ತವರ ಆಸ್ತಿಗಾಗಿ ಮಾತ್ರ ಕಣ್ಣಿಟ್ಟು ಅವರನ್ನು ತುಂಬಾ ಕೆಳಮಟ್ಟದಲ್ಲಿ ನಡೆಸಿಕೊಳ್ಳುವಂತಹ ಘಟನೆಗಳನ್ನು ನಾವು ಕಂಡಿದ್ದೇವೆ. ಇದೀಗ ಇಂತಹ ದುಷ್ಕೃತ್ಯಗಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮುಂದಾಗಿದ್ದು ಹೊಸ ಕಾನೂನನ್ನು ಜಾರಿಗೊಳಿಸಿದೆ.

ಹೌದು, ವಿಧಾನ ಪರಿಷತ್ತಿನಲ್ಲಿ ಸದಸ್ಯರು ಒಬ್ಬರ ಪ್ರಶ್ನೆಗೆ ಉತ್ತರಿಸಿದ್ದ ಸಚಿವ ಕೃಷ್ಣಭೈರ ಗೌಡ ಅವರು ‘ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್-ಧಾನಪತ್ರವನ್ನು ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರದ ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007 ನೀಡಿದೆ ಎಂದು ಮಾಹಿತಿ ನೀಡಿದರು.

ಅಲ್ಲದೆ ಮುಂದುವರೆದು ಕೇಂದ್ರ ಸರ್ಕಾರ 2007 ರಲ್ಲೇ ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಜಾರಿಗೆ ತಂದಿದೆ. ಆದರೆ, ಈ ಬಗ್ಗೆ ಹಲವರಿಗೆ ಮಾಹಿತಿಯೇ ಇಲ್ಲ. ಈ ಮಾಹಿತಿಯನ್ನು ಪರಿಣಾಮಕಾರಿಯಾಗಿ ಎಲ್ಲರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದಲೇ ಪರಿಷತ್ನಲ್ಲಿ ಈ ಕಾಯ್ದೆಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ. ಈ ಕಾಯ್ದೆಯ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರೀಕರನ್ನು ಆರೈಕೆ ಮಾಡಬೇಕು. ಔಷಧಿ ಸೇರಿದಂತೆ ಅವರ ಮಾಸಿಕ ಖರ್ಚಿಗೆ ಹಣ ನೀಡಬೇಕು. ಒಂದು ವೇಳೆ ಹಣ ನೀಡದಿದ್ದರೆ ಅಥವಾ ಆರೈಕೆ ಮಾಡಲು ನಿರ್ಲಕ್ಷಿಸಿದರೆ ಹಿರಿಯ ನಾಗರೀಕರು ಸೆಕ್ಷನ್ 09ರ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ದೂರು ಸಲ್ಲಿಸಬಹುದು ಎಂದು ತಿಳಿಸಿದರು.

ಹಿರಿಯ ನಾಗರೀಕರ ದೂರು ಸಾಬೀತಾದರೆ, ತಂದೆ ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ, ಸೆಕ್ಷನ್ 23ರಂತೆ ಪೋಷಕರು ತಮ್ಮ ಮಕ್ಕಳ ಅಥವಾ ಸಂಬಂಧಿಕರ ಹೆಸರಿನಲ್ಲಿ ಬರೆದಿರುವ ವಿಲ್ ಅಥವಾ ಧಾನಪತ್ರವನ್ನು ರದ್ದುಗೊಳಿಸಿ ಮತ್ತೆ ಪೋಷಕರ ಹೆಸರಿಗೇ ಮರುಸ್ಥಾಪಿಸಲು ಕಾನೂನಿನಲ್ಲಿ ಅವಕಾಶ ಇದೆ. ಈ ಜವಾಬ್ದಾರಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು