Yogi Adityanath: ಧಾರ್ಮಿಕ ಸ್ಥಳಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳ ಶಬ್ದ ನಿಯಂತ್ರಣಕ್ಕೆ ಕ್ರಮ-ಸಿಎಂ ಯೋಗಿ

Share the Article

Yogi Adityanath: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಧಾರ್ಮಿಕ ಸ್ಥಳಗಳಲ್ಲಿ ಅಳವಡಿಕೆ ಮಾಡಲಾಗಿರುವ ಧ್ವನಿವರ್ಧಕಗಳಿಗೆ ಶಾಶ್ವತ ಶಬ್ದ ನಿಯಂತ್ರಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಹೋಳಿ ಆಚರಣೆಯ ಸಮಯದಲ್ಲಿ ಹೆಚ್ಚಿನ ಪ್ರಮಾಣದ ಡಿಜೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ನಿರ್ದೇಶನ ನೀಡಿದ್ದಾರೆ. ಬ್ಯಾಂಕ್‌ಗಳು, ಹಣಕಾಸು ಸಂಸ್ಥೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳಂತಹ ಕಡೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಸೂಚನೆ ನೀಡಲಾಗಿದೆ. ದನಗಳ ಕಳ್ಳಸಾಗಣೆ ಮೇಲೆ ಕಟ್ಟು ನಿಟ್ಟಿನ ನಿಗಾ ಇಡಬೇಕು. ಕಳ್ಳ ಸಾಗಾಣಿಕೆದಾರರು, ವಾಹನ ಮಾಲೀಕರು ಮತ್ತು ಯಾವುದೇ ಸಹಾಯಕ ಪೊಲೀಸ್‌ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಕುರಿತು ಸಿಎಂ ಹೇಳಿದರು.

Comments are closed.