CET: PU ವಿದ್ಯಾರ್ಥಿಗಳೇ ಗಮನಿಸಿ – ಸಿಇಟಿ ‘ಕನ್ನಡ’ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ!!

Share the Article

CET: ಪಿಯುಸಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವಾಲಯದಿಂದ ಮಹತ್ವದ ಸುದ್ದಿ ಒಂದು ಬಂದಿದ್ದು, ಸಿಇಟಿ ಕನ್ನಡ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಹೌದು, ಗುಡ್ ಫ್ರೈಡೆ ದಿನ(ಎ.18)ದಂದು ನಿಗದಿಯಾಗಿದ್ದ ಸಿಇಟಿ ಕನ್ನಡ ಭಾಷಾಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದ್ದು, ಏ. 15ರಂದು ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುವುದು ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿ ಸದಸ್ಯರಾದ ಐವನ್ ಡಿಸೋಜ ಅವರು ಏ.18ರಂದು ಗುಡ್‌ಫ್ರೈಡೆ ದಿನದಂದು ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆಗೆ 2,537 ಮಂದಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ 115 ಮಂದಿ ಕ್ರೈಸ್ತ ಸಮುದಾಯದ ಅಭ್ಯರ್ಥಿಗಳಾಗಿದ್ದಾರೆ. ಹೀಗಾಗಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ ಎಂದು ಮನವಿ ಮಾಡಿದ್ದರು. ಹೀಗಾಗಿ ಸಚಿವರು ಈ ಕುರಿತು ಇಲಾಖೆಗೆ ಸೂಚನೆ ನೀಡಿದ್ದಾರೆ.

Comments are closed.