Belthangady : ಬೆಳ್ತಂಗಡಿಯಲ್ಲಿ ಭಾರಿ ಮಳೆ – 131 ವಿದ್ಯುತ್ ಕಂಬಗಳು ಧರೆಗೆ!!

Belthangady : ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಅಂತೀಯ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ(Belthangady) ತಾಲೂಕಿನಲ್ಲಿಯೂ ಭರ್ಜರಿ ಮಳೆ ಸುರಿದಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. 131 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ ಉರುಳಿವೆ.

ಬುಧವಾರ ಸಂಜೆ ರಭಸದ ಗಾಳಿಯೊಂದಿಗೆ ಆರ್ಭಟಿಸಿದ ವರ್ಷದ ಮೊದಲ ಮಳೆಗೆ ಬೆಳ್ತಂಗಡಿಯಲ್ಲಿ ಒಟ್ಟು 131 ವಿದ್ಯುತ್ ಕಂಬಗಳು ನೆಲಕ್ಕುರುಳಿದ. ಹೀಗಾಗಿ ಹಲವಡೆ ಗುರುವಾರ ವಿದ್ಯುತ್‌ ವ್ಯತ್ಯಯ ಮುಂದುವರಿದಿತ್ತು. ಹಲವೆಡೆ ಮನೆಗಳ ಮೇಲೆ ಮರ ಉರುಳಿ ಬಿದ್ದಿದೆ. ಅಪಾರ ಸಂಖ್ಯೆಯಲ್ಲಿ ಅಡಿಕೆ, ತೆಂಗು, ಬಾಳೆ ಗಿಡಗಳು ತುಂಡಾಗಿ ಅಪಾರ ಪ್ರಮಾಣದ ಕೃಷಿನಷ್ಟ ಉಂಟಾಗಿದೆ.

ಅಂದಹಾಗೆ ಬೆಳ್ತಂಗಡಿ ಮೆಸ್ಕಾಂ ಉಪ ವಿಭಾಗದ ಹಲವು ಗ್ರಾಮಗಳಲ್ಲಿ ಎಲ್‌ಟಿ ಮತ್ತು ಎಚ್‌ಟಿ ವಿದ್ಯುತ್ ಕಂಬಗಳು ಮುರಿದುಬಿದ್ದಿವೆ. ಇಲ್ಲಿ ಒಟ್ಟು 107 ವಿದ್ಯುತ್ ಕಂಬಗಳು ಮುರಿದಿದ್ದು, ₹25 ಲಕ್ಷಕ್ಕಿಂತ ಹೆಚ್ಚಿನ ಹಾನಿ ಉಂಟಾಗಿದೆ. ಉಜಿರೆ ಮೆಸ್ಕಾಂ ಉಪ ವಿಭಾಗದಲ್ಲಿ 24 ವಿದ್ಯುತ್ ಕಂಬಗಳು ಮುರಿದಿದ್ದು ₹3.5 ಲಕ್ಷ ನಷ್ಟ ಅಂದಾಜಿಸಲಾಗಿದೆ. ವಿದ್ಯುತ್ ತಂತಿ ಮೇಲೆ ಮರಗಳು ಬಿದ್ದ ಪರಿಣಾಮ, ಪರಿವರ್ತಕಗಳಿಗೆ ಹಾನಿ ಸಂಭವಿಸಿದೆ.

Comments are closed.