Ration Card: ಪಡಿತರ ಅಕ್ಕಿ ಮಾರಿದರೆ ಕಾರ್ಡ್ ರದ್ದು-ಡೀಸಿ

Ration Card: ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಫಲಾನುಭವಿಗಳಿಗೆ ನಗದು ಬದಲು ಇನ್ನು ಮುಂದೆ ಅಕ್ಕಿ ವಿತರಿಸಲಾಗುತ್ತಿದ್ದು, ಪಡಿತರ ಚೀಟಿದಾರರು ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಿದರೆ ಅವರ ಪಡಿತರ ಚೀಟಿಯನ್ನು ರದ್ದುಪಡಿಸಲಾಗುತ್ತದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಫೆಬ್ರವರಿಯಿಂದ ಅನ್ವಯವಾಗುವಂತೆ ಡಿಬಿಟಿ ಬದಲು 5 ಕೆ.ಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಫೆಬ್ರವರಿಯ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಫೆಬ್ರವರಿಯ ಅಕ್ಕಿಯನ್ನು ಮಾರ್ಚ್‌ನಲ್ಲಿ ವಿತರಿಸಲಾಗುತ್ತದೆ. ಪಡಿತರ ಚೀಟಿಯಲ್ಲಿನ ಸದಸ್ಯರು ಇ-ಕೆವೈಸಿ ಮಾಡಿಸಿಕೊಳ್ಳುವುದು ಬಾಕಿ ಇದ್ದರೆ ಮಾಡಿಸಿಕೊಳ್ಳಬೇಕು. ಇ-ಕೆವೈಸಿಗೆ ಯಾವುದೇ ಶುಲ್ಕ ನೀಡುವಂತಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಅಕ್ಕಿಯನ್ನು ಮಾರಿಕೊಳ್ಳುವವರ ಪಡಿತರ ಚೀಟಿಯನ್ನು ರದ್ದುಪಡಿಸಿ ಜೊತೆಗೆ ಕಾಳಸಂತೆಯಲ್ಲಿ ಆಹಾರಧಾನ್ಯವನ್ನು ಸಾಗಿಸುವ, ದಾಸ್ತಾನು ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955ರ ಅನ್ವಯ ಕ್ರಮ ಕೈಗೊಳ್ಳಲಾಗುವುದು. ಪಡಿತರ ವಿತರಣೆ ಕುರಿತು ದೂರುಗಳಿದ್ದರೆ ಸಹಾಯವಾಣಿ ಸಂಖ್ಯೆ 1967ಕ್ಕೆ ಕರೆ ಮಾಡಬಹುದು ಜಿಲ್ಲಾಧಿಕಾರಿ ಜಿ.ಜಗದೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.