Sullia: ಲ್ಯಾಂಪ್ಸ್ ಸೊಸೈಟಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ನೀಲಮ್ಮ ಉಪಾಧ್ಯಕ್ಷರಾಗಿ ಪುಂಡರೀಕ ಆಯ್ಕೆ!

Sullia: ತೀವ್ರ ಕುತೂಹಲ ಕೆರಳಿಸಿದ್ದ ಸುಳ್ಯ (sullia) ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದ್ದೋದ್ದೇಶ ಸಹಕಾರ ನಿಯಮಿತ (ಲ್ಯಾಂಪ್ಸ್ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನೀಲಮ್ಮ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪುಂಡರೀಕ ಕಾಪುಮಲೆ ಆಯ್ಕೆಯಾಗಿದ್ದಾರೆ.
ಮಾ. 12 ರಂದು ನಡೆದ ಚುನಾವಣೆಯಲ್ಲಿ ವಿಜೇತರಾಗಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದರು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ನೀಲಮ್ಮ ಕೆ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮಾಧವ ಸ್ಪರ್ಧಿಸಿದ್ದರು. ಚುನಾವಣೆ ನಡೆದು 13 ಮತಗಳಲ್ಲಿ ನೀಲಮ್ಮ ಅವರು 7 ಮತ ಪಡೆದು ವಿಜಯಿಯಾದರೆ ಮಾಧವ 6 ಮತಗಳು ಪಡೆದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಪುಂಡರೀಕ ಕೆ.ಆರ್ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ನಾಮನಿರ್ದೇಶಿತ ಸದಸ್ಯ ಭವಾನಿಶಂಕರ ಕಲ್ಮಡ್ಕ ಸ್ಪರ್ಧಿಸಿದ್ದರು.
Comments are closed.