B S Yediyurappa: ಪೋಕ್ಸೋ ಪ್ರಕರಣ; ಯಡಿಯೂರಪ್ಪ ಬಿಗ್ ರಿಲೀಫ್ ನೀಡಿದ ಹೈಕೋರ್ಟ್!

B S Yediyurappa: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ರಿಲೀಫ್ ದೊರಕಿದೆ. ಮಾ.15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಬಿಎಸ್ ಯಡಿಯೂರಪ್ಪಗೆ 1 ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ಗೆ ಶುಕ್ರವಾರ (ಮಾ.14) ಹೈಕೋರ್ಟ್ ತಡೆ ನೀಡಿದೆ. ಇಷ್ಟು ಮಾತ್ರವಲ್ಲದೇ ಯಡಿಯೂರಪ್ಪ ಖುದ್ದು ಹಾಜರಾತಿಗೂ ಹೈಕೋರ್ಟ್ ವಿನಾಯಿತಿಯನ್ನು ನೀಡಿದೆ.
2024 ರ ಮಾರ್ಚ್ನಲ್ಲಿ ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿತ್ತು. ಈ ಕುರಿತು ಸಂತ್ರಸ್ತೆಯ ತಾಯಿ ಆರೋಪವನ್ನು ಮಾಡಿದ್ದರು. ಅನಂತರ ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Comments are closed.