Puttur: ಬಸ್ಸಿನಲ್ಲಿ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಅನ್ಯಕೋಮಿನ ಯುವಕ

Puttur: ಕೆಎಸ್‌ಆರ್ ಟಿಸಿ ಬಸ್ಸಿನಲ್ಲಿ ಕಾಲೇಜಿಗೆ ಬರುತ್ತಿದ್ದ ವೇಳೆ ಕಾಲೇಜು ವಿದ್ಯಾರ್ಥಿನಿಗೆ ಅಪ್ರಾಪ್ತ ಬಾಲಕನೋರ್ವ ಕಿರುಕುಳ ನೀಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಕೆಎಸ್‌ಆ‌ರ್ ಟಿಸಿ ಬಸ್ಸಿನಲ್ಲಿ ಪುತ್ತೂರು ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಗೆ ಅದೇ ಬಸ್‌ನಲ್ಲಿದ್ದ ಪುತ್ತೂರು ಖಾಸಗಿ ಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿಯೋರ್ವ ಕಿರುಕುಳ ನೀಡಿದ್ದ. ಈ ವಿಚಾರ ತಿಳಿಯುತ್ತಿದ್ದಂತೆ ಬಸ್‌ ನಿಲ್ದಾಣದಲ್ಲಿ ಸಾರ್ವಜನಿಕರು ಆ ಹುಡುಗನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ವಿಚಾರಣೆ ಬಳಿಕ ಅಚ್ಚರಿ ಸಂಗತಿ ಒಂದು ಬಹಿರಂಗವಾಗಿದೆ. ಆತ ಗೇರುಕಟ್ಟೆಯ ನಿವಾಸಿಯಾಗಿದ್ದು, ಈ ಕೃತ್ಯ ಎಸಗಲು ಆತನ ಮಾವ ಮತ್ತು ಚಿಕ್ಕಪ್ಪನ ಪ್ರಚೋದನೆ ನೀಡಿದ್ದಾರೆ. ಸದ್ಯ ಅಪ್ರಾಪ್ತ ವಯಸ್ಸಿನ ಬಾಲಕನ ವಿರುದ್ಧ ಮತ್ತು ಆತನಿಗೆ ಪ್ರಚೋದನೆ ನೀಡಿದ ಸಂಬಂಧಿಕರಿಬ್ಬರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ವಿದ್ಯಾರ್ಥಿನಿಯರಿಗೆ ರಕ್ಷಣೆ ನೀಡುವಂತೆ ಬಿಜೆಪಿ ನಿಯೋಗ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ಭೇಟಿ ನೀಡಿ ಆಗ್ರಹಿಸಿದ್ದಾರೆ.

Comments are closed.