Karnataka Govt: ಮೋದಿ ಸರ್ಕಾರದಿಂದ ರಾಜ್ಯದ ಸಿದ್ದು ಸರ್ಕಾರಕ್ಕೆ ಚಿನ್ನದ ಪದಕದ ಗರಿಮೆ

Karnataka Govt: ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರ ಸರ್ಕಾರದಿಂದ ರಾಜ್ಯದ ಸಿದ್ದರಾಮಯ್ಯ ಸರ್ಕಾರಕ್ಕೆ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ” ಲಭಿಸಿದೆ.

ಹೌದು ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಇ ಆಡಳಿತ ಹಾಗೂ ಕಾರ್ಯವೈಕರಿಯನ್ನು ಗಮನಿಸಿ ಕೇಂದ್ರ ಸರ್ಕಾರವು 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ” ಯನ್ನು ಘೋಸಿಸಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ”ಗೆ ರಾಜ್ಯ ಭಾಜನವಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ. ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ, ಈ ಪ್ರಶಸ್ತಿಯು ಜನಪರ ಕಾರ್ಯದ ನಮ್ಮ ಉತ್ಸಾಹವನ್ನು ನೂರ್ಮಡಿಗೊಳಿಸಿದೆ ಎಂದು ಟ್ವಿಟ್ ಮಾಡಿದ್ದಾರೆ.

ಏನಿದು ಇ-ಆಡಳಿತ ಪ್ರಶಸ್ತಿ?

ಇ-ಆಡಳಿತ ಉಪಕ್ರಮಗಳ ಅನುಷ್ಠಾನದಲ್ಲಿನ ಶ್ರೇಷ್ಠತೆಯನ್ನು ಗುರುತಿಸಲು ಮತ್ತು ಉತ್ತೇಜಿಸಲು, ಭಾರತ ಸರ್ಕಾರದ ಆಡಳಿತ ಸುಧಾರಣೆಗಳು ಮತ್ತು ಸಾರ್ವಜನಿಕ ಕುಂದುಕೊರತೆಗಳ ಇಲಾಖೆ (DAR&PG) ಪ್ರತಿ ವರ್ಷ ಇ-ಆಡಳಿತದ ರಾಷ್ಟ್ರೀಯ ಸಮ್ಮೇಳನದಲ್ಲಿ ರಾಷ್ಟ್ರೀಯ ಪ್ರಶಸ್ತಿಗಳನ್ನು ನೀಡುತ್ತದೆ.

Comments are closed.