Teertahalli: ಪೋಸ್ಟ್ ಆಫೀಸ್ ನಲ್ಲಿ ರೈಲ್ವೆ ಟಿಕೆಟ್ ಬುಕಿಂಗ್ ಸೇವೆ ಆರಂಭ!!

Share the Article

Teertahalli: ಶಿವಮೊಗ್ಗದ ತೀರ್ಥಹಳ್ಳಿ ಯ ಅಂಚೆ ಕಚೇರಿಯ ಮೂಲಕ ವಿಶೇಷವಾದ ಸೌಲಭ್ಯವನ್ನು ಜನರಿಗೆ ಪರಿಚಯಿಸಿದ್ದು, ಜನರು ಇನ್ನು ಮುಂದೆ ಪೋಸ್ಟ್ ಆಫೀಸ್ನಲ್ಲಿಯೇ ಟ್ರೈನ್ ಟಿಕೆಟ್ ಬುಕ್ ಮಾಡಬಹುದಾಗಿದೆ.

ಹೌದು, ತೀರ್ಥಹಳ್ಳಿ(Teertahalli)ಯ ಮುಖ್ಯ ಅಂಚೆ ಕಚೇರಿಯಲ್ಲಿ ರೈಲ್ವೆ ಮುಂಗಡ ಟಿಕೆಟ್ ಬುಕ್ಕಿಂಗ್ ಸೌಲಭ್ಯವನ್ನು ಸಾರ್ವಜನಿಕರಿಗೆ ನೀಡಲಾಗಿದೆ. ಈ ಸೌಲಭ್ಯವು ತೀರ್ಥಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಅನುಕೂಲವಾಗಲಿದೆ. ಈ ಮೂಲಕ ರೈಲ್ವೆ ಪ್ರಯಾಣಿಕರು ಅಂಚೆ ಕಚೇರಿಗೆ ತೆರಳಿ ತಮ್ಮ ಟಿಕೆಟ್ ಅನ್ನು ಸುಲಭವಾಗಿ ಬುಕ್ ಮಾಡಬಹುದು.

ಈ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಮನವಿ ಮಾಡಿದ್ದಾರೆ. ಒಂದು ವೇಳೆ ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳದಿದ್ದರೆ, ಅದು ರದ್ದಾಗಲಿದ್ದು, ಆದ್ದರಿಂದ ರೈಲ್ವೆ ಪ್ರಯಾಣಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಅವರು ವಿನಂತಿಸಿದ್ದಾರೆ.

Comments are closed.