Mangaluru: ಮರದ ಕೊಂಬೆ ಮುರಿದು ಬಿದ್ದು ಮೂವರಿಗೆ ಗಾಯ!

Mangaluru: ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರಿನ ನಗರದ ಹಂಪನಕಟ್ಟೆ ಜಂಕ್ಷನ್ ಬಳಿಯ ಶೆಟ್ಟಿ ಆಟೋ ಪಾರ್ಕ್ ಬಳಿ ಮಾ.17 ರ ಸಂಜೆ ನಡೆದಿದೆ.
ಮಲ್ಲೂರು ಉದ್ದಬೆಟ್ಟು ನಿವಾಸಿಗಳಾದ ಮರಿಯಂ ಮುಫೀದಾ (18), ಫಾಹಿಮಾ ಮರಿಯಂ (17) ಹಾಗೂ ಅಬ್ಬೆಟ್ಟು ನಿವಾಸಿ ಅಫ್ರತ್ (18) ಗಾಯಾಳುಗಳು ಎಂದು ವರದಿಯಾಗಿದೆ. ಗಾಯಗೊಂಡವರಲ್ಲಿ ಅಫ್ರತ್‌ಗೆ ಹೆಚ್ಚು ಗಾಯವಾಗಿದೆ.
ನಿನ್ನೆ ಸಂಜೆ 4.30 ಕ್ಕೆ ಕಾಲೇಜು ಮುಗಿಸಿ ಮನೆಗೆ ತೆರಳಲು ಹಂಪನಕಟ್ಟೆಯ ಬಳಿ ಬಸ್ಸಿಗೆ ಕಾಯುತ್ತಿದ್ದಾಗ ಮರದ ಕೊಂಬೆ ಬಿದ್ದಿದೆ. ಈ ಪ್ರದೇಶದಲ್ಲಿ ಅತೀ ಹೆಚ್ಚು ಜನರು ಓಡಾಡುವ ಪ್ರದೇಶವಾಗಿದೆ.
ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಯಲ್ಲಿ ಇನ್ನೂ ಕೆಲವರಿಗೆ ಗಾಯವಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣವೇ ಆಗಮಿಸಿದ್ದು, ಮರದ ಕೊಂಬೆಗಳನ್ನು ತೆರವುಗೊಳಿಸಿದೆ.
Comments are closed.