Karkala: ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ ಪ್ರಕರಣ; ಆರೋಪಿ ಪತ್ನಿ ಪ್ರತಿಮಾ ಜಾಮೀನು ಅರ್ಜಿ ತಿರಸ್ಕಾರ

Share the Article

Karkala: ಅಜೆಕಾರು ಗ್ರಾಮದ ದೆಪ್ಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಕುರಿತಂತೆ ಆರೋಪಿ ಪತ್ನಿ ಪ್ರತಿಮಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕಾರ್ಕಳದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಂಚಾರಿ ಪೀಠದ ನ್ಯಾಯಾಲಯದ ನ್ಯಾಯಾಧೀಶ ಸಮೀವುಲ್ಲಾ ಅವರು ಜಾಮೀನು ಮಂಜೂರು ಮಾಡಲು ನಿರಾಕರಿಸಿ ಆದೇಶ ಹೊರಡಿಸಿದ್ದಾರೆ.

ಜಾಮೀನಿಗೆ ಅರ್ಜಿ ಸಲ್ಲಿಸಿರುವ ಪ್ರತಿಮಾ ಅವರಿಗೆ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇನ್ನೋರ್ವ ಆರೋಪಿ ದಿಲೀಪ್‌ ಹೆಗ್ಡೆ (ಪ್ರತಿಮಾ ಪ್ರಿಯಕರ) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನೂ ನ್ಯಾಯಾಲಯ ವಜಾ ಮಾಡಿತ್ತು.

Comments are closed.