of your HTML document.

Accident: ಸಂತೆಕಟ್ಟೆಯಲ್ಲಿ ಭೀಕರ ರಸ್ತೆ ಅಪಘಾತ: ಬೈಕಿಗೆ ಢಿಕ್ಕಿಯಾಗುದನ್ನು ತಪ್ಪಿಸಲು ಹೋಗಿ ಲಾರಿ ಪಲ್ಟಿ!

Accident: ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆಯ ಆಶೀರ್ವಾದ ಸಮೀಪ ಚಲಿಸುತ್ತಿರುವಾಗ ಅಡ್ಡ ಬಂದ ಬೈಕಿಗೆ ಡಿಕ್ಕಿಯಾದುದನ್ನು ತಪ್ಪಿಸಲು ಹೋಗಿ ಲಾರಿಯೊಂದು ಮಗುಚಿಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

 

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸರಕು ಸಾಗಿಸುತ್ತಿದ್ದ ಲಾರಿಗೆ ಬೈಕೊಂದು ಅಡ್ಡ ಬಂದಿದೆ. ಅಪಘಾತ ತಪ್ಪಿಸಲು ಲಾರಿ ಚಾಲಕ ತಕ್ಷಣ ಬ್ರೇಕ್ ಹಾಕಿದ ಕಾರಣ ಲಾರಿ ಪಲ್ಟಿಯಾಗಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

 

Comments are closed.