Geeta Shivarajkumar: ಗೀತಾ ಶಿವರಾಜ್‌ಕುಮಾರ್‌ಗೆ ಸರ್ಜರಿ!

Share the Article

Geeta Shivarajkumar: ಶಿವರಾಜ್‌ಕುಮಾರ್‌ ಪತ್ನಿ ಗೀತಾ ಶಿವರಾಜ್‌ಕುಮಾರ್‌ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಕತ್ತಿನ ಭಾಗದಲ್ಲಿ ಶಸ್ತ್ರಚಿಕಿತ್ಸೆ ನಡೆದಿದೆ ಎಂದು ವರದಿಯಾಗಿದೆ.

ಇತ್ತೀಚೆಗಷ್ಟೇ ನಟ ಶಿವರಾಜ್‌ಕುಮಾರ್‌ ಕ್ಯಾನ್ಸರ್‌ ಚಿಕಿತ್ಸೆಗೆ ಒಳಗಾಗಿದ್ದರು. ಈಗ ಶಿವರಾಜ್‌ಕುಮಾರ್‌ ಆರೋಗ್ಯವಾಗಿದ್ದಾರೆ. ಗೀತಾ ಶಿವರಾಜ್‌ಕುಮಾರ್‌ ಅವರಿಗೆ ನರದ ಸಮಸ್ಯೆಯಿಂದ ಕತ್ತಿನ ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಅವರು ಈ ಮೊದಲೇ ಇದಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಿತ್ತು. ಆದರೆ ಇದು ಆಗಿರಲಿಲ್ಲ. ಈಗ ಅವರಿಗೆ ಕತ್ತಿನ ಭಾಗದಲ್ಲಿ ಸರ್ಜರಿ ನಡೆದಿದೆ.

Comments are closed.