

ಉಬರಡ್ಕದಲ್ಲಿ ಗೆಲ್ಲು ತುಂಡಾಗಿ ಮರದಲ್ಲಿದ್ದ ವ್ಯಕ್ತಿ ಕೆಳಕ್ಕೆ ಬಿದ್ದು ಗಂಭೀರಗಾಯಗೊಂಡ ವ್ಯಕ್ತಿ ಇಂದು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಮಾವಿನ ಮಿಡಿ ಕೊಯ್ಯುತ್ತಿದ್ದಾಗ ತಾನು ನಿಂತಿದ್ದ ಗೆಲ್ಲು ತುಂಡಾಗಿ ಬಿದ್ದಿದ್ದು, ವ್ಯಕ್ತಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಇವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಉಬರಡ್ಕದ ನೆಯ್ಯೋಣಿ ನಿವಾಸಿ ಜನಾರ್ದನ ಪೂಜಾರಿ ಮೃತ ವ್ಯಕ್ತಿ.
ಮಾ.22 ರಂದು ಇವರು ಕೆಲಸಕ್ಕೆ ಹೋಗಿದ್ದರು. ಅಲ್ಲಿ ಮಾವಿನ ಮರವೇರಿ ಮಾವಿನಮಿಡಿ ಕೊಯ್ಯುತ್ತಿದ್ದಾಗ ತಾನು ನಿಂತಿದ್ದ ಗೆಲ್ಲು ತುಂಡಾಗಿ ಬಿದ್ದು, ಇವರು ಕೂಡಾ ಕೆಳಕ್ಕೆ ಬಿದ್ದಿದ್ದರು. ಸೊಂಟಕ್ಕೆ ಹಾಗೂ ತಲೆಗೆ ಗಾಯವಾಗಿದೆ. ಕೂಡಲೇ ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗೆಂದು ವೈದ್ಯರ ಸಲಹೆಯ ಮೇರೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.













