Coconut : ತೆಂಗಿಗೆ ಬಂಪರ್ ಬೆಲೆ – 19,000 ಗಡಿ ದಾಟಿದ ಕ್ವಿಂಟಾಲ್ ಕೊಬ್ಬರಿ!!

Share the Article

Coconut : ಅನೇಕ ಕಾರಣದಿಂದ ತೆಂಗಿನ ಬೆಳೆ ಇಳುವರಿಯಲ್ಲಿ ಕುಂಠಿತವಾಗುತ್ತಿದ್ದು ಮಾರುಕಟ್ಟೆಯಲ್ಲಿ ತೆಂಗಿಗೆ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ತಂಗಿಗೆ ಬಂಪರ್ ಬೆಲೆ ಬಂದಿದ್ದು, ತೆಂಗು ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ.

ಹೌದು, ಕೊಬ್ಬರಿ ಕ್ವಿಂಟಾಲ್‌ಗೆ 19 ಸಾವಿರ ರೂ. ದಾಟುವ ಮೂಲಕ ದಾಖಲೆ ಸೃಷ್ಟಿಸಿದೆ. ಕಳೆದ ಕೆಲ ದಿನಗಳಿಂದ ದಿನದಿಂದ ದಿನಕ್ಕೆ ನಿಧಾನವಾಗಿ ಕೊಬ್ಬರಿ ಬೆಲೆ ಏರುತ್ತಿದ್ದು, ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡುತ್ತಿದೆ.

ಕಳೆದ 2014-15ರಲ್ಲಿ 19 ಸಾವಿರ ಗರಿಷ್ಠ ಬೆಲೆ ಪಡೆದಿದ್ದು ಈವರೆಗೆ ದಾಖಲೆಯಾಗಿತ್ತು. ಆದ್ರೆ ಈಗ ತಿಪಟೂರಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಕೊಬ್ಬರಿ 19,051 ರೂ.ಗೆ ಮಾರಾಟವಾಗುವ ಮೂಲಕ ಈ ಹಿಂದಿನ ದಾಖಲೆ ಮುರಿದಿದೆ.

ಅಷ್ಟೇ ಅಲ್ಲದೆ ತೆಂಗಿನಕಾಯಿಯೂ ಸಹ ಒಂದಕ್ಕೆ 50 ರೂ.ಗೆ ಮಾರಾಟವಾಗುತ್ತಿದ್ದು, ಯುಗಾದಿ ಹಬ್ಬಕ್ಕೆ 60 ರೂ. ದಾಟಿದರೂ ಅಚ್ಚರಿಯಿಲ್ಲ. ಮಾರುಕಟ್ಟೆಯಲ್ಲಿ ಬೇಡಿಕೆಯಷ್ಟು ಆವಕವಿಲ್ಲದಿರುವುದರಿಂದ ಬೆಳೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

Comments are closed.