Cylinder blast: ಸಿಲಿಂಡ‌ರ್ ಸ್ಪೋಟಗೊಂಡು 7 ಮಂದಿ ದುರ್ಮರಣ

Share the Article

Cylinder blast: ಮನೆಯೊಂದರಲ್ಲಿ ಸಿಲಿಂಡರ್‌ ಸ್ಫೋಟಗೊಂಡು (Cylinder blast) ನಾಲ್ವರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ 7 ಜನ ದುರ್ಮರಣ ಹೊಂದಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಪರ್ಥ ಪ್ರತಿಮಾದಲ್ಲಿ ನಡೆದಿದೆ.

ಮೃತರೆಲ್ಲರೂ ಒಂದೇ ಕುಟುಂಬದವರು ಎನ್ನಲಾಗಿದ್ದು, ಮನೆಯಿಂದ ಎಲ್ಲಾ ಶವಗಳನ್ನು ಹೊರತೆಗೆಯಲಾಗಿದ್ದು, ಗಾಯಾಳು ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ಸಂದರ್ಭ ಮನೆಯಲ್ಲಿ ಸಂಗ್ರಹಿಸಲಾಗಿದ್ದ ಪಟಾಕಿಗಳು ಕೂಡಾ ಹೊತ್ತಿ ಉರಿದು, ಬೆಂಕಿ ವ್ಯಾಪಿಸಿಕೊಂಡಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ಇನ್ನು ಮನೆಯೊಳಗೆ ಪಟಾಕಿಗಳನ್ನು ತಯಾರಿಸಲಾಗುತ್ತಿತ್ತೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Comments are closed.