Bengaluru: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವೆಬ್‌ಸೈಟ್ ನಲ್ಲಿ ಕನ್ನಡದಲ್ಲಿ ಸೇವೆ ಆರಂಭ

Share the Article

Bengaluru: ದೇಶದ ಆಕರ್ಷಣೀಯ ಏರ್ಪೋಟ್ ಎಂಬ ಖ್ಯಾತಿ ಪಡೆದಿರುವ ಬೆಂಗಳೂರಿನ (Bengaluru) ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ಹೊಸ ಕ್ರಮ ಜರುಗಿಸಲಾಗಿದೆ.

ಅದಕ್ಕಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕೃತ ವೆಬ್ ಸೈಟ್ ನಲ್ಲಿ ಕನ್ನಡ ಭಾಷೆಯ ಆಯ್ಕೆಯನ್ನು ಹೊಸದಾಗಿ ಪರಿಚಯಿಸಲಾಗಿದೆ.

ಸ್ಥಳೀಯ ಪ್ರಯಾಣಿಕರು ಈ ಆಯ್ಕೆಯನ್ನು ಬಳಸುವ ಮೂಲಕ ಇನ್ನು ಮುಂದೆ ವಿಮಾನ ನಿಲ್ದಾಣದ ಸೇವೆಗಳನ್ನು ಸುಲಭವಾಗಿ ತಮ್ಮದೇ ಭಾಷೆಯಲ್ಲಿ ಪಡೆದುಕೊಳ್ಳಬಹುದಾಗಿದೆ.

Comments are closed.