WAQF: ವಕ್ಸ್ ತಿದ್ದುಪಡಿ ಮಸೂದೆಯಲಿ ಹೊಸ ಬದಲಾವಣೆಗಳು ಏನು?

WAQF: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಕ್ಸ್ (WAQF)ತಿದ್ದುಪಡಿಮಸೂದೆಯನ್ನು ಮಂಡನೆ ಮಾಡಲು ಮುಂದಾಗಿದೆ. ವಿಪಕ್ಷಗಳು ಮತ್ತು ಮುಸ್ಲಿಮರ ವಿರೋಧದ ನಡುವೆ ಲೋಕಸಭೆಯಲ್ಲಿ ಮಧ್ಯಾಹ್ನ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಮಸೂದೆ ಮಂಡಿಸಲಿದ್ದಾರೆ.

ಇದಕ್ಕೆ ಇಂದೇ ವೋಟಿಂಗ್‌ ನಡೆಯುವ ಸಾಧ್ಯತೆಯೂ ಇದೆ. ವಕ್ಸ್‌ ತಿದ್ದುಪಡಿ ಮಸೂದೆಯಲ್ಲಿ ಪ್ರಸ್ತಾಪಿಸಲಾದ ಪ್ರಮುಖ ಬದಲಾವಣೆಗಳು ಇಂತಿವೆ.

ವಕ್ಸ್‌ ಆಸ್ತಿಗಳ ಸರ್ವೆ ಮತ್ತು ನಿಯಂತ್ರಣ: ಹಿಂದೆ ಸರ್ವೆಯನ್ನು ರಾಜ್ಯ ಸರ್ಕಾರ ನೇಮಿಸಿದ ಸರ್ವೆ ಆಯುಕ್ತರು ನಡೆಸ್ತಿದ್ದರು. ಇದರಲ್ಲಿ ಸರ್ಕಾರದ ನೇರ ಹಸ್ತಕ್ಷೇಪ ಕಡಿಮೆ ಇತ್ತು. ಈಗ ತಿದ್ದುಪಡಿಯಲ್ಲಿ ಸರ್ವೆಗಳನ್ನು ಡಿಸಿಗಳಿಗೆ ವರ್ಗಾಯಿಸಲಾಗಿದೆ. ಡಿಸಿಗಳ ಮೇಲ್ವಿಚಾರಣೆಯಲ್ಲಿ ರಾಜ್ಯದ ಕಂದಾಯ ಕಾನೂನುಗಳಿಗೆ ಅನುಗುಣವಾಗಿ ಸರ್ವೆ ನಡೆಯಲಿದೆ. ಇದರಿಂದ ಸರ್ಕಾರಕ್ಕೆ ವಕ್ಸ್ ಆಸ್ತಿಗಳ ಮೇಲೆ ಹೆಚ್ಚಿನ ನಿಯಂತ್ರಣ ಸಿಗಲಿದೆ.

ವಕ್ಸ್ ಮಂಡಳಿಯ ರಚನೆ: ಮೊದಲು ಕೇಂದ್ರ, ರಾಜ್ಯ ವಕ್ಸ್ ಮಂಡಳಿಗಳಲ್ಲಿ ಮಹಿಳೆಯರು ಅಥವಾ ಮುಸ್ಲಿಮೇತರ ಸದಸ್ಯರನ್ನು ಸೇರಿಸುವ ಕಡ್ಡಾಯ ನಿಯಮ ಇರಲಿಲ್ಲ. ತಿದ್ದುಪಡಿಯಲ್ಲಿ ಕೇಂದ್ರ ವಕ್ಸ್ ಮಂಡಳಿಯಲ್ಲಿ ಕನಿಷ್ಠ ಇಬ್ಬರು ಮಹಿಳೆಯರು, ಇಬ್ಬರು ಮುಸ್ಲಿಮೇತರ ಸದಸ್ಯರನ್ನು ನೇಮಿಸುವುದು ಕಡ್ಡಾಯ ಮಾಡಲಾಗಿದೆ. ರಾಜ್ಯ ವಕ್ಸ್ ಮಂಡಳಿಗಳಲ್ಲಿಯೂ ಈ ಬದಲಾವಣೆ ತರಲಾಗಿದೆ.

ಲೆಕ್ಕಪರಿಶೋಧನೆ: ಹಿಂದೆ ವಕ್ಸ್ ಮಂಡಳಿಗಳ ಖಾತೆಗಳ ಲೆಕ್ಕಪರಿಶೋಧನೆಯನ್ನು ಮಂಡಳಿಯೇ ನೇಮಿಸಿದ ಲೆಕ್ಕಪರಿಶೋಧಕರು ಮಾಡುತ್ತಿದ್ದರು. ತಿದ್ದುಪಡಿಯಲ್ಲಿ ರಾಜ್ಯ ಸರ್ಕಾರವು ರಚಿಸುವ ಲೆಕ್ಕಪರಿಶೋಧಕರ ಸಮಿತಿಯೇ ಆಡಿಟ್ ನಡೆಸಬೇಕು. ಇದರಿಂದ ಸರ್ಕಾರದ ಮೇಲ್ವಿಚಾರಣೆ ಹೆಚ್ಚಾಗಲಿದೆ.

*ಆಸ್ತಿ ನೋಂದಣಿ ಮತ್ತು ಪಾರದರ್ಶಕತೆ: ವಕ್ಸ್ ಆಸ್ತಿಗಳ ನೋಂದಣಿ ಮತ್ತು ವಿವರಗಳ ಸಲ್ಲಿಕೆಗೆ ಕಡ್ಡಾಯ ಸಮಯ ಮಿತಿ ಇರಲಿಲ್ಲ. ಈಗ ಎಲ್ಲ ವಕ್ಸ್ ಆಸ್ತಿಗಳನ್ನು ಕಾಯಿದೆಯಡಿ ನೋಂದಾಯಿಸುವುದು ಕಡ್ಡಾಯ. 6 ತಿಂಗಳೊಳಗೆ ವಿವರ ಸಲ್ಲಿಸಬೇಕು. ಪ್ರತಿ 5 ವರ್ಷಕ್ಕೊಮ್ಮೆ ಸರ್ವೆ ನಡೆಸಬೇಕು ಎಂದು ತಿದ್ದುಪಡಿ ಮಾಡಲಾಗಿದೆ.

Comments are closed.