Meat Sale: ಏ.6 ರಂದು ಚಿಕನ್‌, ಮಟನ್‌ ಸಿಗಲ್ಲ!

Share the Article

Meat Sale: ಶ್ರೀರಾಮ ನವಮಿಯ ಪ್ರಯುಕ್ತ ಏ.6ರ ಭಾನುವಾರ ಬೆಂಗಳೂರಿನಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ.

ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ.

Comments are closed.