Bengaluru: ಇಲಾಖೆಯಲ್ಲಿ ಯಾವುದೇ ನೇಮಕಾತಿಯಿಲ್ಲ, ಮೋಸಹೋಗ ಬೇಡಿ: ಲಕ್ಷ್ಮೀ ಹೆಬ್ಬಾಳ್ಳರ್‌ ಮನವಿ

Share the Article

Bengaluru: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ ವಿಚಾರದಲ್ಲಿ ಕೆಲವರು ಹಣ ವಸೂಲಿ ಮಾಡುತ್ತಿದ್ದಾರೆ. ಈ ವಿಚಾರ ಸಲುವಾಗಿ ದೂರುಗಳು ಬಂದಿವೆ. ಆದರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ ಯಾರೂ ಕೂಡ ಮೋಸ ಹೋಗಬಾರದೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು ಕೆಲಸ ಅಥವಾ ನೇಮಕಾತಿ ಹೆಸರಿನಲ್ಲಿ ಹಲವರು ಮೋಸ ಮಾಡುತ್ತಿದ್ದಾರೆ. ಇಲಾಖೆಯಲ್ಲಿ ಯಾವುದೇ ನೇಮಕಾತಿಗಳಿಲ್ಲ. ಹಾಗೇನಾದರೂ ಇದ್ದರೆ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಹೊರಡಿಸಲಾಗುವುದು. ಹೀಗಾಗಿ ಯಾರೂ ಕೂಡ ಮೋಸ ಹೋಗಬೇಡಿ. ಇಲಾಖೆಯಲ್ಲಿ ನೇಮಕಾತಿ ಮಾಡಿಸುತ್ತೇನೆಂದು ಮಧ್ಯವರ್ತಿಗಳು ಹಣ ಕೇಳಿದರೆ ಕೂಡಲೇ ಸಮೀಪದ ಪೊಲೀಸ್‌ ಠಾಣೆಯಲ್ಲಿ ದೂರನ್ನು ದಾಖಲಿಸಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಮನವಿ ಮಾಡಿದ್ದಾರೆ.

Comments are closed.