Kundapura: ಕುಂದಾಪುರ: ಬೈಕ್ ಸ್ಕೀಡ್ ಆಗಿ ಯಕ್ಷಗಾನ ಕಲಾವಿದ ಮೃತ್ಯು!

Share the Article

Kundapura: ಅರಾಟೆ ಸೇತುವೆ ದುರಸ್ಥಿ ಕಾಮಗಾರಿಗೆ ಹಾಕಲಾಗಿದ್ದ ಮಣ್ಣಿನ ರಾಶಿಗೆ ಬೈಕ್ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಬೈಕ್ ನಲ್ಲಿದ್ದ ಯಕ್ಷಗಾನ ಕಲಾವಿದರೊಬ್ಬರು ಮೃತಪಟ್ಟ ಘಟನೆ ಎ. 5 ರ ರಾತ್ರಿ ನಡೆದಿದೆ.

ಮೃತ ದುರ್ದೈವಿಯನ್ನು ಹಟ್ಟಿಯಂಗಡಿ ಮೇಳದ ಪ್ರಧಾನ ಮದ್ದಳೆಗಾರ ನಾರಾಯಣ ಪೂಜಾರಿ (40 ) ಎಂದು ಗುರುತಿಸಲಾಗಿದೆ.

ಶಿರೂರಿನ ತೂದಳ್ಳಿಯಲ್ಲಿ ನಡೆಯಬೇಕಿದ್ದ ಹಟ್ಟಿಯಂಗಡಿ ಮೇಳದ ಆಟ ಮಳೆ ಬಂದ ಕಾರಣದಿಂದ ಅನಿವಾರ್ಯವಾಗಿ ರದ್ದಾಗಿತ್ತು. ಆ ಕಾರಣದಿಂದ ಮೇಳದ ಪ್ರಧಾನ ಮದ್ದಳೆಗಾರ ನಾರಾಯಣ ಪೂಜಾರಿ ಅವರು ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದರು. ಈ ಸಂದರ್ಭ ಅರಾಟೆ ಸೇತುವೆ ಬಳಿ ದುರಸ್ತಿಗಾಗಿ ಏಕಮುಖ ಸಂಚಾರ ವ್ಯವಸ್ಥೆ ಮಾಡಿದ್ದು ಗೊಂದಲಕ್ಕೆ ಒಳಗಾದ ನಾರಾಯಣ ಪೂಜಾರಿ ಅವರು ದ್ವಿಮುಖ ಸಂಚಾರ ರಸ್ತೆಯಲ್ಲಿ ಬರುತ್ತಿದ್ದಾಗ ಅಡ್ಡ ಹಾಕಿದ ಮಣ್ಣಿನ ರಾಶಿಗೆ ಗುದ್ದಿ ಬೈಕ್ ನಿಯಂತ್ರಣ ಕಳೆದುಕೊಂಡು ಬಿದ್ದು ಮೃತಪಟ್ಟಿದ್ದಾರೆ.

Comments are closed.