Bengaluru: ನಡುರಾತ್ರಿ ರಸ್ತೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಪರಾರಿ

Bengaluru: ಬೆಂಗಳೂರು (Bengaluru) ಗುಂಟೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ಏಪ್ರಿಲ್ 3ರ ಬೆಳಗ್ಗೆ 1:55 ಸುಮಾರಿಗೆ ಇಬ್ಬರು ಯುವತಿಯರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಯುವತಿಯರು ಭಯದಿಂದ ದೂರು ದಾಖಲಿಸಿಲ್ಲವಾದರೂ, ಸ್ಥಳೀಯ ನಿವಾಸಿಯಾದ ಲೋಕೇಶ್ ಗೌಡ ಎಂಬುವವರು ಈ ಬಗ್ಗೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿ, ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.
Comments are closed.