CM Siddaramaiah: ಪೌರ ಕಾರ್ಮಿಕರಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

CM Siddaramaiah: ಪೌರ ಕಾರ್ಮಿಕರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಮೇ.1 ಕಾರ್ಮಿಕರ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆಯನ್ನು ಕಾಯಂ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಮೇ 1 ಕಾರ್ಮಿಕರ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಹೇಳಿದರು. ಪೌರಕಾರ್ಮಿಕರ ಜೊತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂ ಮಾಡಲಾಗುವುದು, ಪೌರ ಕಾರ್ಮಿಕ ಸಮುದಾಯಕ್ಕೆ ನಗದು ರಹಿತ ಆರೋಗ್ಯ ಕಾರ್ಡ್ ನೀಡಲಾಗುವುದ, ಕಾರ್ಮಿಕರ ಸಿಂಧುತ್ವದ ಸಮಸ್ಯೆ ಬಗೆಹರಿಸಲಾಗುವುದು ಎನ್ನುವ ಭರವಸೆಯನ್ನು ನೀಡಿದರು.
Comments are closed.