Belthangady: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಸಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು!

Share the Article

Belthangady: ಬೆಳ್ಳಾರೆ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಸಾಫಿ ಬೆಳ್ಳಾರೆ ಎ.7 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಆರೋಪಿ ಸಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್‌ ಮೂಲಕ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬೆಳ್ತಂಗಡಿ ಕೋರ್ಟ್‌ಗೆ ಹಾಜರು ಪಡಿಸಲಾಗಿದೆ. 2017 ರಲ್ಲಿ ಆರ್‌.ಎಸ್.ಎಸ್‌ ಹಾಗೂ ಕಲ್ಲಡ್ಕ ಭಟ್‌ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿ ಕೋರ್ಟ್‌ಗೆ ಹಾಜರು ಮಾಡಲಾಗಿದೆ.

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿ ಸಾಫಿ ಬೆಳ್ಳಾರೆಯನ್ನು ಎರಡು ವರ್ಷದ ಹಿಂದೆ ಎನ್‌ಐಎ ಬಂಧನ ಮಾಡಿ ನ್ಯಾಯಾಂಗ ಬಂಧನದಲ್ಲಿಟ್ಟಿದೆ. ಕೋರ್ಟ್‌ಗೆ ಹಾಜರುಪಡಿಸಿ ಆರೋಪಿ ಸಾಫಿಯನ್ನು ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯಲಾಗಿದೆ.

Comments are closed.